ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತಗಳು ನಕಲಿ ಅಂದಾಗ ಅನುಭವಿಸಿದ ನೋವು ನನಗೆ ಗೊತ್ತು: ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆ ಮುಂದೂಡಲು ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಹಾಗಾಗಿ ರಾಜರಾಜೇಶ್ವರಿ ನಗರ ಬೈಎಲೆಕ್ಷನ್ ನಿಗದಿಯಂತೆ ನಡೆಯಲಿದೆ. ಈ ತೀರ್ಪಿನ ಬಗ್ಗೆ ಬಿಜೆಪಿ ಮುಖಂಡ ಮುನಿರತ್ನ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

'ಪ್ರಕರಣ ನ್ಯಾಯಾಲಯದಲ್ಲಿ ಇದ್ದಿದ್ದರಿಂದ ನಾನು ಮಾತನಾಡಿರಲಿಲ್ಲ. ಇಂದು ಸುಪ್ರೀಂಕೋರ್ಟ್ ನ್ಯಾಯದ ಪರವಾಗಿ ತೀರ್ಪು ನೀಡಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ತೆಗೆದುಕೊಂಡ ಎಲ್ಲ ಮತಗಳು ಅಸಲಿ ಎಂದು ಹೇಳಿದೆ. ಮಾಧ್ಯಮ, ಸಾರ್ವಜನಿಕರು ಮತಗಳು ನಕಲಿ ಎಂದು ಪ್ರಶ್ನಿಸಿದಾದ ನೋವು ಆಗುತ್ತಿತ್ತು' ಎಂದು ಮುನಿರತ್ನ ಹೇಳಿದರು.

ಚುನಾವಣೆಯಲ್ಲಿ ಒಬ್ಬರ ಮೇಲೆ ಒಬ್ಬರು ಮಾತನಾಡುವುದು ಸಹಜ. ಚುನಾವಣಾ ಮತ್ತು ರಾಜಕೀಯದಲ್ಲಿ ವೈಯಕ್ತಿಯ ದ್ವೇಷ ಇರಲ್ಲ. ಬಿಜೆಪಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ತಿಳಿಸಿದರು.

Edited By : Vijay Kumar
PublicNext

PublicNext

13/10/2020 01:15 pm

Cinque Terre

63.44 K

Cinque Terre

1

ಸಂಬಂಧಿತ ಸುದ್ದಿ