ಬೆಂಗಳೂರು: ಬೈ ಎಲೆಕ್ಷನ್ ದಿನದಿಂದ ದಿನಕ್ಕೇ ರಂಗೇರುತ್ತಿದೆ. ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಸಕಲ ತಯಾರಿ ನಡೆಸಿದ್ದಾರೆ.
ನಾಮಪತ್ರ ಸಲ್ಲಿಕೆ ಕಾರ್ಯವೂ ಚುರುಕಾಗಿದೆ.
ಸದ್ಯ ರಾಜರಾಜೇಶ್ವರಿ ಕ್ಷೇತ್ರ ಉಪ ಚುನಾವಣೆಯ ಸಂಬಂಧ ನಾಳೆ ಬೆಳಗ್ಗೆ 11ಗಂಟೆಗೆ ಮುನಿರತ್ನ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಹಕಾರ ಖಾತೆಯ ಸಚಿವ ಎಸ್ಟಿ ಸೋಮಶೇಖರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆ ಬೆಳಗ್ಗೆ9.30ಕ್ಕೆ ಮುನಿರತ್ನ ಅವರನ್ನು ಪಕ್ಷದ ಕಚೇರಿಗೆ ಬರಲು ಹೇಳಿದ್ದಾರೆ.
11 ಗಂಟೆಗೆ ಮುನಿರತ್ನ ನಾಮಪತ್ರ ಸಲ್ಲಿಸುತ್ತಾರೆ. ಸಿಎಂ ಯಡಿಯೂರಪ್ಪನವರೇ ಈ ಬಗ್ಗೆ ಅಧಿಕೃತವಾಗಿ ತಿಳಿಸುತ್ತಾರೆ. ಅಭ್ಯರ್ಥಿ ವಿಚಾರವಾಗಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದರು.
ಈ ವಿಚಾರದ ಬಗ್ಗೆ ಮುನಿರತ್ನ ಪ್ರತಿಕ್ರಿಯಿಸಿ, ಎಸ್.ಟಿ.ಸೋಮಶೇಖರ್ ಹೇಳಿಕೆಯ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ತೀರ್ಮಾನವೇ ಅಂತಿಮ.
ಪಕ್ಷದಿಂದ ನನಗೆ ಯಾವುದೇ ಮಾಹಿತಿ ಇಲ್ಲ. ಸೋಮಶೇಖರ್ ಹೇಳಿಕೆ ಬಗ್ಗೆ ಅವರ ಜತೆಯೇ ಮಾತಾಡುತ್ತೇನೆ ಎಂದು ತಿಳಿಸಿದರು.
PublicNext
13/10/2020 04:59 pm