ಬೆಂಗಳೂರು : ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳು ಫೈನಲ್.
ರಾಜರಾಜೇಶ್ವರಿ ನಗರಕ್ಕೆ ಮುನಿರತ್ನ ಹಾಗೂ ಶಿರಾ ಕ್ಷೇತ್ರಕ್ಕೆ ಮಾಜಿ ಸಂಸದ ಸಿಪಿ ಮೂಡಲಗಿರಿಯಪ್ಪ ಅವರ ಪುತ್ರ ಡಾ. ರಾಜೇಶ್ ಗೌಡ ಅವರ ಹೆಸರನ್ನು ಫೈನಲ್ ಮಾಡಿದೆ.
ಚುನಾವಣೆಯಲ್ಲಿ ಅಕ್ರಮವೆಸಗಿ ಗೆಲುವು ಸಾಧಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮುನಿರತ್ನ ವಿರುದ್ಧ ತುಳಸಿ ಮುನಿರಾಜುಗೌಡ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿ ಘೋಷಣೆ ಮಾಡಿದೆ.
ನವೆಂಬರ್ 3ರಂದು ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು ಬಿಜೆಪಿಯಿಂದ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಯಿತು.
PublicNext
13/10/2020 08:00 pm