ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆ ಕಣ ರಂಗೇರುತ್ತಿದ್ದು, ಇಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್‌ನಿಂದ ಕುಸುಮಾ ಹನುಮಂತರಾಯಪ್ಪ ಮತ್ತು ಜೆಡಿಎಸ್‌ನಿಂದ ಕೃಷ್ಣಮೂರ್ತಿ ಉಪ ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನೆಲೆ ರಾಜರಾಜೇಶ್ವರಿ ನಗರ ಜಂಟಿ ಆಯುಕ್ತರ ಕಚೇರಿಯ ಸುತ್ತಮುತ್ತ ಭದ್ರತೆ ಕೈಗೊಳ್ಳಲಾಗಿತ್ತು.
ನಾಮಪತ್ರ ಸಲ್ಲಿಕೆ ವೇಳೆ ಮುನಿರತ್ನ ಅವರಿಗೆ ಡಿಸಿಎಂ ಅಶ್ವಥ್ ನಾರಾಯಣ್, ಸಚಿವರಾದ ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಆರ್.ಅಶೋಕ್ ಮತ್ತು ಸುಧಾಕರ್ ಸಾಥ್ ನೀಡಿದರು. ಕಾಂಗ್ರೆಸ್ ಅಭ್ಯರ್ಥಿ ಹನುಮಂತರಾಯಪ್ಪ ಸಹ ನಾಮಪತ್ರ ಸಲ್ಲಿಸಿದರು.ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಇದ್ದರು. ಇಯತ್ತ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಅವರ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.
PublicNext
14/10/2020 01:35 pm