ಬೆಂಗಳೂರು: ಬೈ ಎಲೆಕ್ಷನ್ ಕಣ ರಂಗೇರುತ್ತಿದೆ ಇದರ ಮಧ್ಯೆ 'ಆರ್.ಆರ್. ನಗರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐಆರ್ ದಾಖಲಿಸಿರುವುದು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ನೀಚ ರಾಜಕಾರಣ,ಅಧಿಕಾರದ ದುರ್ಬಳಕೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.
ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, 'ಚುನಾವಣೆಗೆ ಅಡ್ಡಿಪಡಿಸುವ ಯತ್ನದಲ್ಲಿರುವ ರಾಜ್ಯ ಸರ್ಕಾರದ ಈ ನಡೆ ಖಂಡನೀಯ' ಎಂದು ಕಿಡಿಕಾರಿದ್ದಾರೆ.
'ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಬೆದರಿಕೆ ಒಡ್ಡುತ್ತಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ.
ತಾಕತ್ತಿದ್ದರೆ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಿಸಿ' ಎಂದು ಸವಾಲು ಹಾಕಿದರು.
'ಬುಧವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಯಾರೆಲ್ಲಾ 100 ಮೀಟರ್ ಒಳಗಿದ್ದರೋ ಅವರೆಲ್ಲರ ವಿರುದ್ಧ ಕೇಸ್ ದಾಖಲಿಸಬೇಕು.
ಒಬ್ಬೊಬ್ಬರಿಗೊಂದು ನ್ಯಾಯವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸದ್ಯ ಕುಸುಮಾ ವಿರುದ್ಧ ಎಫ್ ಐಆರ್ ದಾಖಲಾದ್ರು ನಾವ್ ತಲೆಕೆಡಿಸಿಕೊಳ್ಳುವುದಿಲ್ಲ ಬೇಲ್ ಪಡೆಯಲ್ಲ, ಸ್ಟೇಷನ್ ಗೂ ಹೋಗಲ್ಲ ಎಂದು ಚಾಲೆಂಜ್ ಮಾಡಿದ್ದಾರೆ.
PublicNext
15/10/2020 10:34 am