ಚಂಡೀಗಢ: ಮಹಿಳೆಯರ ಅಭಿವೃದ್ಧಿಗೆ ಪಣತೊಟ್ಟಿರುವ ಪಂಜಾಬ್ ಸರ್ಕಾರ ನಾಗರಿಕ ಸೇವೆಗಳಲ್ಲಿ ಮಹಿಳೆಯರಿಗೆ ಕೊನೆಗೂ ಶೇ.33 ರಷ್ಟು ಮೀಸಲಾತಿಗೆ ಅನುಮೋದನೆ ನೀಡಿದೆ.
ಮಹಿಳೆಯರನ್ನು ಮತ್ತಷ್ಟು ಸಬಲೀಕರಣಗೊಳಿಸುವ ಸಲುವಾಗಿ ಪಂಜಾಬ್ ಸರ್ಕಾರ ಸರ್ಕಾರಿ ಉದ್ಯೋಗಗಳಲ್ಲಿ ಶೇ.33 ರಷ್ಟು ಮೀಸಲಾತಿಯನ್ನು ಘೋಷಿಸಿದೆ. ಇದು ಪಂಜಾಬ್ ರಾಜ್ಯ ನಾಗರಿಕ ಸೇವೆಗಳ ನೇರ ನೇಮಕಾತಿಗೆ ಅನ್ವಯಿಸುತ್ತದೆ ಎಂದು ಸ್ವತಃ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅಧ್ಯಕ್ಷತೆಯ ರಾಜ್ಯ ಸಚಿವ ಸಂಪುಟ ಸಭೆಯು, ಪಂಜಾಬ್ ನಾಗರೀಕ ಸೇವೆ ನಿಯಮಗಳು-2020ಕ್ಕೆ ಅನುಮೋದನೆ ನೀಡಿತು. ಇದು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಮತ್ತು ನಿಗಮಗಳಿಗೆ ಸಂಬಂಧಿಸಿದ ಎ, ಬಿ, ಸಿ ಮತ್ತು ಡಿ ಗ್ರೂಪ್‌ಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲಿದೆ.
PublicNext
15/10/2020 04:35 pm