ನೆಲಮಂಗಲ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಹೋಗಿ ಬಿಜೆಪಿ ಅಧಿಕಾರಕ್ಕೆ ಬರಲು ನಾನೇ ಕಾರಣ ಎಂದು ನೆಲಮಂಗಲದ ಮಾಜಿ ಶಾಸಕ ಎಂವಿ ನಾಗರಾಜು ಹೇಳಿದ್ದಾರೆ.
ತಾಲೂಕು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಡಾ.ಸುಧಾಕರ್ ಹಾಗೂ ಎಂಟಿಬಿ ನಾಗರಾಜು ಅವರು ಬಿಜೆಪಿಗೆ ಬರಲು ನಾನು ಕಾರಣ. ಎಲ್ಲರನ್ನೂ ಸಂಪರ್ಕಿಸಿ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸಿದೆ. ಇತ್ತ ಸಿಎಂ ಯಡಿಯೂರಪ್ಪ ಅವರು ಸಹ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿದ ನಾಯಕರಿಗೆ ನೀಡಿದ್ದ ಭರವಸೆಗಳನ್ನು ಪೂರೈಸಿದ್ದಾರೆ ಎಂದರು.
ಇನ್ನೂ ಕಾಂಗ್ರೆಸ್‌ನ ಐದು ಶಾಸಕರು ಬಿಜೆಪಿ ಸೇರಲು ಸಿದ್ಧರಿದ್ದಾರೆ. ಈ ವಿಚಾರವನ್ನು ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದೇನೆ. ಆದರೆ ಅವರು ಈಗಲೇ ಈಗ ಬೇಡ. ಮುಂದೆ ನೋಡೋಣ ಎಂದಿದ್ದಾರೆ ಎಂದು ಹೇಳಿದರು.
PublicNext
16/10/2020 11:07 pm