ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಎಸ್‌ವೈಗೆ ಕರೆ ಮಾಡಿ ಪ್ರವಾಹ ಪರಿಸ್ಥಿತಿ ವಿಚಾರಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರೆ ಮಾಡಿ ರಾಜ್ಯದಲ್ಲಿ ಭಾರೀ ಮಳೆಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ.

ಸಿಎಂ ಯಡಿಯೂರಪ್ಪ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಈ ಕುರಿತು ಖುದ್ದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಲಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಕರ್ನಾಟಕದ ಸಹೋದರ, ಸಹೋದರಿಯರೊಂದಿಗೆ ಕೇಂದ್ರ ಸರ್ಕಾರ ಗಟ್ಟಿಯಾಗಿ ನಿಂತಿದ್ದು, ಕರ್ನಾಟಕದ ಜನತೆ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಮೋದಿ ಅಭಯ ನೀಡಿದ್ದಾರೆ.

Edited By : Vijay Kumar
PublicNext

PublicNext

17/10/2020 07:25 am

Cinque Terre

52.18 K

Cinque Terre

7

ಸಂಬಂಧಿತ ಸುದ್ದಿ