ಬೆಂಗಳೂರು: ವರುನಾರ್ಭಟಕ್ಕೆ ತತ್ತರಿಸಿದ ಉತ್ತರ ಕರ್ನಾಟಕದ ಜನತೆಯ ಕಣ್ಣೀರು ಒರೆಸಬೇಕಾದ ಜನಪ್ರತಿನಿಧಿಗಳೇ ತಮ್ಮ ಗೋಳು ಹೇಳಿಕೊಂಡು ಕಣ್ಣೀರು ಸುರಿಸುತ್ತಿದ್ದಾರೆ.
ಹೌದು ಡಿಸಿಎಂ ಗೋವಿಂದ ಕಾರಜೋಳ ನನಗೆ 70 ವರ್ಷ ವಯಸ್ಸಾಗಿದೆ. ನಾನು ಹಾಗೂ ನನ್ನ ಕುಟುಂಬದವರು ಕೊರೊನಾ ಸಂಕಷ್ಟಕ್ಕೆ ಸಿಲುಕಿದ್ದೇವೆ.
600, 700 ಕಿ.ಮೀ.ಓಡಾಡಲು ಆಗುವುದಿಲ್ಲ ಎಂದು ಗೊಳೋ ಎಂದು ಕಣ್ಣೀರು ಹಾಕಿದ್ದಾರೆ.
ಚುನಾವಣಾ ಪ್ರಚಾರ ಮಾಡುತ್ತಾರೆ, ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ತಮ್ಮ ಕ್ಷೇತ್ರದ ಜನರ ಬಳಿ ಹೋಗುವುದಿಲ್ಲ ಎಂಬುದರ ಕುರಿತು ಕಾರಜೋಳ ಪ್ರತಿಕ್ರಿಯಿಸಿದ್ದು, ನನಗೆ 70 ವರ್ಷ. ನಾನು ಇಷ್ಟು ವರ್ಷ ಯಾವ ರೀತಿ ಕೆಲಸ ಮಾಡಿದ್ದೇನೆ, ಕೊರೊನಾ ಸಂದರ್ಭದಲ್ಲಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ನಿಮಗೆ ತಿಳಿದಿದೆ.
ಸದ್ಯ ಕೊರೊನಾ ಸಂಕಷ್ಟದಲ್ಲಿರುವ ನಾನು 600-700 ಕಿ.ಮೀ. ಹೋಗಲು ಆಗಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ನನ್ನ ಪರಿಸ್ಥಿತಿ ಅರಿತು ಮುಖ್ಯಮಂತ್ರಿಗಳು ಕಂದಾಯ ಸಚಿವ ಆರ್.ಅಶೋಕ್ ಅವರನ್ನು ರಾಜ್ಯ ಪ್ರವಾಸಕ್ಕೆ ಕಳುಹಿಸಿದ್ದಾರೆ.
ಶಿರಾ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದ ವಿಚಾರದ ಕುರಿತು ಮಾತನಾಡಿದ ಅವರು, ಅಸಹಾಯಕನಾಗಿ ಶಿರಾಗೆ ಹೋಗಿ ಬಂದಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇವರ ಈ ದೃಶ್ಯವನ್ನು ಕಂಡ ಹಾಗೂ ವರುಣಾರ್ಭಟಕ್ಕೆ ತತ್ತರಿಸಿದ ಜನ ನಿಮ್ಗೆ ವಯಸ್ಸಾಗಿದೆ ಹಾಗಿದ್ರೆ ನಿಮ್ಗೆ ಈ ರಾಜಕೀಯ ಬೇಕೆ ಎಂದು ಪ್ರಶ್ನಿಸಿದ್ದಾರೆ.
PublicNext
17/10/2020 03:46 pm