ಬೆಂಗಳೂರು : ಬೈ ಎಲೆಕ್ಷನ್ ಶುರುವಾಗಿದ್ದೇ ಆಗಿದ್ದು ರಾಜಕೀಯ ಕೆಸರೆರಚಾಟ ಜೋರಾಗಿದೆ.
ಜೋತೆಗಿದ್ದವರೆ ದುಶ್ ಮನ್ ಗಳಂತೆ ವರ್ತಿಸುತ್ತಿದ್ದಾರೆ ಒಂದು ಕಾಲದಲ್ಲಿ ಮೈತ್ರಿ ಸರ್ಕಾರ ಮಾಡಿಕೊಂಡು ರಾಜ್ಯವನ್ನಾಳಿದ ಜೆಡಿಎಸ್ ಮತ್ತು ಕಾಂಗ್ರೆಸ್ ಸದ್ಯ ಹಾವು ಮುಂಗುಸಿಯಂತೆ ಕಿತ್ತಾಡುತ್ತಿದ್ದಾರೆ.
ಒಬ್ಬರ ಕಾಲು ಒಬ್ಬರು ಎಳೆಯುತ್ತಿದ್ದಾರೆ.
ಹೌದು ಜೆಡಿಎಸ್ ಮುಗಿಸಬೇಕು ಎಂಬುದೇ ಕಾಂಗ್ರೆಸ್ ಲೀಡರ್ ಗಳ ಅಜೆಂಡಾ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ.
ಬಿಜೆಪಿಗಿಂತ ಜೆಡಿಎಸ್ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡರ ಕುಟುಂಬವನ್ನು ದುಡ್ಡು ಕೊಟ್ಟು ಕೊಂಡುಕೊಳ್ಳಲು ಆಗುವುದಿಲ್ಲ.
ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಒಬ್ಬ ಮುಖ್ಯಮಂತ್ರಿ ದೇಶದಲ್ಲಿ ಕಣ್ಣೀರು ಹಾಕಿದ್ದಾರೆ ಅಂದರೆ ಅದು ನಾನು ಮಾತ್ರ. ಅಂತಹ ವಾತಾವರಣದಲ್ಲಿ ನಾನಿದ್ದೆ ಎಂದು ಬೇಸರ ವ್ಯಕ್ತಪಡಿಸಿದರು.
ಬಿಜೆಪಿ ಹಾಗೂ ಬಿಜೆಪಿ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.
ಆದರೆ, ಜನರ ಹಣ ಲೂಟಿ ಹೊಡೆಯೋರ ಬಗ್ಗೆ ನಾನು ಮಾತಾಡಲ್ಲ. 250 ಕೋಟಿ ರೂ. ಕಳ್ಳ ಬಿಲ್ ಮಾಡಿ ಹಣ ಗುಳುಂ ಮಾಡಿದ್ದಾರೆ.
ಜನರ ಪಾಪದ ಹಣದಲ್ಲಿ ಬಿಜೆಪಿ ಅಭ್ಯರ್ಥಿ ಫುಡ್ ಕಿಟ್ ನೀಡಿದ್ದಾರೆ ಎಂದು ಮುನಿರತ್ನ ವಿರುದ್ಧ ಹರಿಹಾಯ್ದರು.
ನನ್ನ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಯಾರೂ ಹೇಳಲಿಲ್ಲ ಎಂದು ಕಾಂಗ್ರೆಸ್ ನಾಯಕರನ್ನು ಟೀಕಿಸಿದರು.
PublicNext
19/10/2020 07:59 am