ಬೆಂಗಳೂರು: ಉಪ ಚುನಾವಣೆ ರಂಗೇರಿದ್ದು, ಪ್ರಕಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಲಗ್ಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ಭಾನುವಾರ ನಡೆದ ಪ್ರಚಾರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ದಿನಕ್ಕೆ ಮೂರ್ನಾಲ್ಕು ಬಾರಿ ಡ್ರೆಸ್ ಬದಲಾಯಿಸಿ ಚೆನ್ನಾಗಿ ಕಾಣುವುದೇ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಯಾಗಿದೆ. ಅವರು ದಿನಕ್ಕೆ ಎಷ್ಟು ಉಡುಪು ಬದಲಾಯಿಸುತ್ತಾರೆ ? ಅವುಗಳ ಎಷ್ಟು ಲಕ್ಷ ರೂಪಾಯಿಯೋ ಗೊತ್ತಿಲ್ಲ. ಆದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ದಿನ ಬೆಳಗ್ಗೆಯಿಂದ ರಾತ್ರಿವರೆಗೆ ಒಂದೇ ಪಂಚೆ ಹಾಕಿರುತ್ತಾರೆ ಎಂದು ಕುಟುಕಿದರು.
ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆರು ವರ್ಷ ಕಳೆದಿದೆ. ಪ್ರಧಾನಿ ಮೋದಿ ಅವರ ಸಾಧನೆ ಏನು? ಚೀನಾ ವಿರುದ್ಧ ಸ್ಪರ್ಧೆ ಇರಲಿ, ಬಾಂಗ್ಲಾದೇಶದ ಜೊತೆ ಸ್ಪರ್ಧೆ ಮಾಡಬೇಕಿದೆ. ಅಂತಹ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.
PublicNext
19/10/2020 03:03 pm