ಬೆಳಗಾವಿ: ಕಾಂಗ್ರೆಸ್‌ನ್ನು ಜನ ಸಮುದ್ರದಲ್ಲಿ ಬೀಸಾಕ್ತಾರೆ ಎಂಬ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, 'ತಾನಿರುವ ಹುದ್ದೆಯ ಗೌರವದ ಅರಿವಿಲ್ಲದ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿ. ಬೆಂಕಿ ಹಾಕೋದು, ಸಮುದ್ರಕ್ಕೆ ಬಿಸಾಕೋದು ಬರೀ ಇಂತಹುದನ್ನೇ ತಲೆಯಲ್ಲಿ ತುಂಬಿಕೊಂಡಿದ್ದಾರೆ. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಹೀಗೆ ತನ್ನನ್ನು ಮುಳುಗಿಸ್ತೇನೆ ಅಂತ ಬಂದ ಬಹಳಷ್ಟು ಜನರನ್ನು ನೋಡಿದೆ' ಎಂದು ಗುಡುಗಿದರು.
ದೇಶದಲ್ಲಿ ಅತ್ಯಂತ ಹಳೆಯ ಪಕ್ಷ ಅಂತ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ಕಾಂಗ್ರೆಸ್ ಪಕ್ಷದ ಬಗ್ಗೆ ಕಟೀಲ್‌ಗೆ ಏನು ಗೊತ್ತಿದೆ ಎಂದು ಕುಟುಕಿದರು.
PublicNext
19/10/2020 04:50 pm