ಬೆಂಗಳೂರು: ರಾಜಕೀಯ ತೆವಲಿಗೆ ಮಾತನಾಡೋದು ಬಿಡಿ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವಾರ್ನಿಂಗ್ ನೀಡಿದ್ದಾರೆ.
ಜಾತಿ ಸಮೀಕ್ಷೆ ಬಿಡುಗಡೆಗೆ ಮಾಜಿ ಎಚ್‌ಡಿಕೆ ಅಡ್ಡಗಾಲು ಹಾಕಿದ್ದರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಜಾತಿ ಸಮೀಕ್ಷೆಗೆ ಅಡ್ಡಗಾಲು ಹಾಕಿದ್ದೆ ಎನ್ನುವುದು ನಿನ್ನೆ ರಾತ್ರಿ ಅವರಿಗೆ ಕನಸ್ಸು ಬಿದ್ದಿದಂತಾ? ನನ್ನ ವಿರುದ್ಧ ಟೀಕೆ ಮಾಡುವುದಕ್ಕೆ ಬೇರೆ ವಿಚಾರಗಳಿಲ್ಲ. ಜನರನ್ನ ಮರಳು ಮಾಡುವುದಕ್ಕೆ ಬತ್ತಳಿಕೆಯಲ್ಲಿ ಯಾವುದೇ ಅಸ್ತ್ರಗಳು ಇಲ್ಲ. ಹೀಗಾಗಿ ಹಳೆಯದನ್ನು ಮತ್ತೆ ಕೆದಕಿಕೊಂಡು ಹೊರಟಿದ್ದಾರೆ' ಎಂದು ಅಸಮಾಧಾನ ಹೊರ ಹಾಕಿದರು.
ಸಿದ್ದರಾಮಯ್ಯ ಅವರು ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮತಿ ಅಧ್ಯಕ್ಷರಾಗಿದ್ದರು. ಒಂದು ದಿನವೂ ಸಮೀಕ್ಷೆ ವಿಚಾರ ಚರ್ಚೆಯೇ ಮಾಡಿಲ್ಲ. ಕಾಂಗ್ರೆಸ್‌ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳುತ್ತಾರೆ. ಈಗ ಹಿಂದುಳಿದವರ ಬಗ್ಗೆ ಇವರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನ ಕೆಣಕಬೇಡಿ ಎಚ್ಚರಿಕೆ ಕೊಡ್ತಿದ್ದೇನೆ. ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಲಿ ಎಂದು ಹೇಳಿದರು.
PublicNext
19/10/2020 05:18 pm