ಭೋಪಾಲ್: ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ʼಐಟಂʼ ಎಂದು ಕರೆಯುವ ಮೂಲಕ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ನಾಲಿಗೆ ಹರಿಬಿಟ್ಟಿದ್ದಾರೆ. ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ದಬ್ರಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ರಾಜೆ ಅವರ ಪರ ಕಮಲ್‌ನಾಥ್ ಭಾನುವಾರ ಪ್ರಚಾರ ನಡೆಸಿದ್ದರು. ಈ ವೇಳೆ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, 'ನಮ್ಮ ಅಭ್ಯರ್ಥಿ ಸುರೇಶ್ ರಾಜೆ ಸರಳ ವ್ಯಕ್ತಿ ಆಗಿದ್ದು ಆಕೆಯಂಥಲ್ಲ. ಆಕೆಯ ಹೆಸರೇನು? ನಿಮಗೆಲ್ಲರಿಗೂ ಆಕೆಯ ಬಗ್ಗೆ ನನಗಿಂತ ಚೆನ್ನಾಗಿ ಗೊತ್ತಿತ್ತು. ಅವಳು ಎಂತಹ ಐಟಂ ಅಂತ ನೀವು ನನಗೆ ಮೊದಲೇ ಎಚ್ಚರಿಕೆ ನೀಡಬೇಕಾಗಿತ್ತುʼ ಎಂದು ಹೇಳಿದ್ದರು. ಈ ವಿಡಿಯೋ ಸಾಮಾಜಿಕ ವೈರಲ್ ಆಗಿದ್ದು, ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಸಂಬಂಧ ಬಿಜೆಪಿ ನಿಯೋಗ ಭೋಪಾಲ್ ನಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಕಮಲ್ ನಾಥ್ ಮಹಿಳೆ ಮತ್ತು ದಲಿತರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಇಮರ್ತಿ ದೇವಿ ಯಾರು?: ಕಾಂಗ್ರೆಸ್‌ನಿಂದ ಗ್ವಾಲಿಯರ್‌ನ ದಬ್ರಾ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ಇಮರ್ತಿ ದೇವಿ ಸದ್ಯ ಶಿವರಾಜ್ ಸಿಂಗ್ ಚೌಹಾಣ್ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆಯಾಗಿದ್ದಾರೆ. ಈಗ ಹಾಲಿ ಕ್ಷೇತ್ರದಿಂದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.
PublicNext
19/10/2020 07:17 pm