ವಿಜಯಪುರ: ರಾಜ್ಯದ ಮುಖ್ಯಮಂತ್ರಿ ಬಿಎಸ್ ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರದವರಿಗೂ ಬಿಎಸ್ ವೈ ಸಾಕಾಗಿ ಹೋಗಿದ್ದಾರೆ. ಉತ್ತರ ಉತ್ತರ ಕರ್ನಾಟಕದವರು 100 ಶಾಸಕರನ್ನ ಗೆಲ್ಲಿಸಿ ಕಳಿಸುತ್ತಾರೆ ಹಾಗಾಗಿ ಮುಂದಿನ ಸಿಎಂ ಕರ್ನಾಟಕದವರೇ ಎಂದರು.
ನನ್ನ ಕ್ಷೇತ್ರದ 125 ಕೋಟಿ ಅನುದಾನ ಕಡಿತ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ವೈ ಹಾಗೂ ನನ್ನ ಮಧ್ಯೆ ಜಗಳ ಶುರುವಾಗಿದೆ.
ಸಿಎಂ ಬಿಎಸ್ ವೈ ಬಹಳ ದಿನ ಅಧಿಕಾರದಲ್ಲಿ ಇರಲ್ಲ ಎಂದು ಮಾತನಾಡಿದ್ದಾರೆ.
PublicNext
20/10/2020 09:56 am