ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಕ್ಷೇತ್ರದ ಜನರಿಗೆ ಹಣ, ಕುಕ್ಕರ್ ನೀಡಿ ಮತಯಾಚಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಚುನಾವಣಾ ಆಯುಕ್ತರಿಗೆ ದೂರು ನೀಡಲು ಮುಂದಾಗಿದ್ದಾರೆ.
ಪಕ್ಷವನ್ನು ಬಿಟ್ಟು ಬಿಜೆಪಿ ಸೇರಿದ ಮುನಿರತ್ನ ಅವರನ್ನು ಉಪ ಚುನಾವಣೆಯಲ್ಲಿ ಸೋಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಭರ್ಜರಿ ಪ್ರಚಾರ ಕೂಡ ನಡೆಸಿದ್ದಾರೆ. ಇತ್ತ ಮುನಿರತ್ನ ಅವರಿಗೆ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಆರ್‌ಆರ್ ನಗರ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ.
ಈ ಮಧ್ಯೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮತದಾರರಿಗೆ ಹಣ, ಸೀರೆ ಮತ್ತು ಕುಕ್ಕರ್ ನೀಡಿ ಮತಚೀಟಿಯನ್ನು ಅಕ್ರಮವಾಗಿ ಪಡೆಯುತ್ತಿದ್ದಾರೆ. ಅಲ್ಲದೆ ಬಿಜೆಪಿ ಕಾರ್ಯಕರ್ತರು ಹಣ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ದೂರಿದೆ. ಜೊತೆಗೆ ಇಂದು ಸಂಜೆ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದೆ ಎನ್ನಲಾಗಿದೆ.
PublicNext
20/10/2020 03:53 pm