ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣಾ ಕದನ ರಂಗೇರುತ್ತಿದೆ. ಅದರಲ್ಲೂ ರಾಜರಾಜೇಶ್ವರಿ ನಗರ ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರನ್ನು ಸೋಲಿಸಲು ತಂತ್ರಗಳನ್ನು ರೂಪಿಸುತ್ತಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಚುನಾವಣಾ ತಂತ್ರಕ್ಕೆ ಬಿಜೆಪಿ ಭರ್ಜರಿ ಪ್ರತಿತಂತ್ರದ ಮೂಲಕ ಶಾಕ್ ಕೊಟ್ಟಿದೆ. ಆಪರೇಷನ್ ಹಸ್ತ ಮಾಡಿದ್ದ ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಆಪರೇಷನ್ ಕಮಲದ ಮೂಲಕ ತಿರುಗೇಟು ನೀಡಿದೆ.
ಹೌದು. ಡಿಕೆ ಬ್ರದರ್ಸ್ ಆಪರೇಷನ್ ಹಸ್ತದ ಮೂಲಕ ಬಿಜೆಪಿ ನಾಯಕರಿಗೆ ಗಾಳ ಹಾಕಿದ್ದರು ಎನ್ನಲಾಗಿತ್ತು. ಆದರೆ ಇದಕ್ಕೂ ಮುನ್ನವೇ ಬಿಜೆಪಿ ನಾಯಕರು ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಪಕ್ಷದ ಬಿಬಿಎಂಪಿ ಮಾಜಿ ಸದಸ್ಯರನ್ನು ಪಕ್ಷಕ್ಕೆ ಸೆಳೆದಿದ್ದಾರೆ. ಅವರು ಇಂದು ಬಿಜೆಪಿ ಪಕ್ಷದ ಅಧ್ಯಕ್ಷ ನಳೀನ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಯಾಗಿದ್ದಾರೆ.
PublicNext
21/10/2020 05:11 pm