ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಂತ್ರಿಗಿರಿ ವಿಚಾರವಾಗಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕುತ್ತಲ್ಲೇ ಬಂದಿದ್ದಾರೆ. ಇದೇ ವಿಚಾರಕ್ಕೆ ಇಂದು ಕೂಡ ಗುಡುಗಿದ್ದು, 'ಸಚಿವನಾಗುವುದಕ್ಕೆ ಯಾರದ್ದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ' ಸಿಎಂಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಯತ್ನಾಳ್ ಅವರು, "ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇನೆ. ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ. ಸಚಿವನಾಗುವುದಕ್ಕೆ ಯಾರದ್ದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನವೂ ಅಲ್ಲ" ಎಂದು ಕಿಡಿಕಾರಿದ್ದಾರೆ.
PublicNext
21/10/2020 05:22 pm