ಹುಟ್ಟು ಹಬ್ಬದ ಖುಷಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. 56 ನೇ ವಸಂತಕ್ಕೆ ಕಾಲಿಟ್ಟ ಅಮಿತ್ ಶಾ ಕೇಂದ್ರ ಸರ್ಕಾರದ ಸಚಿವರಾಗಿ ಬಿಜೆಪಿಯ ಹಿಂದಿನ ರಾಷ್ಟ್ರಾಧ್ಯಕ್ಷರಾಗಿ ಛಲ ಬಿಡದ ಕೆಲಸ ಮಾಡಿ ಮೆಚ್ಚುಗೆ ಗಳಿಸಿದ್ದಾರೆ.
ಅಮಿತ್ ಶಾ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನಿಮ್ಮ ಸಮರ್ಪಣಾ ಭಾವ ಹಾಗೂ ಕಾರ್ಯಕ್ಷೇತ್ರದ ಉತ್ಕೃಷ್ಟತೆಗೆ ದೇಶ ಸಾಕ್ಷಿಯಾಗಿದೆ. ದೇವರು ನಿಮಗೆ ಸುಧೀರ್ಘ ಆಯಸ್ಸು ಹಾಗೂ ಆರೋಗ್ಯ ನೀಡಲಿ ಎಂದು ಶುಭ ಕೋರಿದ್ದಾರೆ.
1964ರಲ್ಲಿ ಮುಂಬೈನಲ್ಲಿ ಜನಿಸಿದ ಆಮಿತ್ ಶಾ ಬಾಲ್ಯದಿಂಲೂ ಆರ್ ಎಸ್ ಎಸ್ ಸಂಘಟನೆಯಲ್ಲಿ ಗುರುತಿಸಿಕೊಂಡವರು. 2014ರಲ್ಲಿ ಬಿಜೆಪಿ ಸಂಪೂರ್ಣ ಬಹುಮತದಿಂದ ಕೇಂದ್ರದಲ್ಲಿ ಅಧಿಕಾರ ಹಿಡಿದಾಗ ಅಮಿತ್ ಶಾ ಸಚಿವರಾಗಿದ್ದರು. ಈಗ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ನರೇಂದ್ರ ಮೋದಿ ಅವರು ಗುಜರಾತ್ ಸಿಎಂ ಆಗಿದ್ದಾಗ ಅಲ್ಲಿನ ಗೃಹ ಸಚಿವರಾಗಿಯೂ ಅಮಿತ್ ಶಾ ಕೆಲಸ ಮಾಡಿದ್ದರು.
PublicNext
22/10/2020 01:29 pm