ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೋಕರಿ ಕಟೀಲ್​ ಒಬ್ಬ ಕಾಡು ಮನುಷ್ಯ, ಸಂಘ ಪರಿವಾರದಲ್ಲಿ ಮಾನವಂತರಿದ್ದರೆ ಬುದ್ಧಿಹೇಳಿ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಡುವೆ ಮತ್ತಷ್ಟು ಬಿರುಸಿನ ವಾಗ್ದಾಳಿ ನಡೆಸಿದೆ.

ಟ್ವೀಟ್ ಮೂಲಕ ಕಿಡಿಕಾರಿರುವ ಸಿದ್ದರಾಮಯ್ಯ, 'ನಳಿನ್ ಕುಮಾರ್​ ಕಟೀಲ್​ ಓರ್ವ ಕಾಡು ಮನುಷ್ಯ. ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಕಟೀಲ್ ಅವರಿಗೆ ಸ್ವಲ್ಪ ಬುದ್ಧಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು' ಎಂದು ಗುಡುಗಿದ್ದಾರೆ.

'ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದು ಕಿಡಿಕಾರಿದ್ದಾರೆ.

Edited By : Vijay Kumar
PublicNext

PublicNext

22/10/2020 02:26 pm

Cinque Terre

98.5 K

Cinque Terre

12

ಸಂಬಂಧಿತ ಸುದ್ದಿ