ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಡುವಿ ವಾಕ್ಸಮರ ಇದೀಗ ತಾರಕಕ್ಕೇರಿದೆ. ಈ ಮಧ್ಯೆ ಬಿಜೆಪಿ ಎಂಟ್ರಿಕೊಟ್ಟಿದ್ದು ಸಿದ್ದರಾಮಯ್ಯ ಅವರ ವಿರುದ್ಧ ಅಸಮಾಧಾನ ಹೊರ ಹಾಕಿದೆ.
ನಳಿನ್ ಕುಮಾರ್ ಕಟೀಲ್ ಕಾಡು ಮನುಷ್ಯ, ಮಂಗಳೂರಿನಲ್ಲಿ ಬೀದಿ ಬೀದಿ ಅಲೆಯುತ್ತಿದ್ದವನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ಮಾಡಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಅಸಮಾಧಾನ ಹೊರಹಾಕಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
'ಮಾನ್ಯ ಸಿದ್ದರಾಮಯ್ಯ ನೀವು ಬಳಸುತ್ತಿರುವ ಪದಗಳೇ ಯಾರು 'ಕಾಡು ಮನುಷ್ಯ' ಎಂಬುದನ್ನು ಸಾಬೀತು ಪಡಿಸುತ್ತಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ನೀವು ಕಾಂಗ್ರೆಸ್ ಪಕ್ಷದ ವಿದೂಷಕ ಇದ್ದ ಹಾಗೆ ಹಾಗಿದೆ" ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.
'ಚುನಾವಣೆಯಲ್ಲಿ ಸ್ವಾರ್ಥಕ್ಕಾಗಿ ಪರಮೇಶ್ವರರನ್ನೇ ಸೋಲಿಸಿದ ಕುತಂತ್ರಿ ನೀವಲ್ಲವೇ? ಈ ಹಿಂದಿನ ಉಪಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಬಿಎಸ್ವೈ ಮತ್ತು ಬಿಜೆಪಿ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ' ಎಂದು ತಿರುಗೇಟು ನೀಡಿದೆ.
ಮತ್ತೊಂದು ಟ್ವೀಟ್ನಲ್ಲಿ, ಬಾದಾಮಿಯ ಶಾಸಕ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು 2019ರಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದರು. ಜನತೆ ನಿಮ್ಮ ಬೆನ್ನುಮೂಳೆ ಮುರಿದ ಇತಿಹಾಸ ನೆನಪಿಸಿಕೊಳ್ಳಿ, ಗೆದ್ದದ್ದು ಕೇವಲ 1,696 ಮತಗಳಿಂದ!. ಸ್ವಲ್ಪ ವ್ಯತ್ಯಾಸ ಆಗಿದ್ದರೂ ನೀವು ಕಾಡು ಮನುಷ್ಯರಂತೆ ಜೀವನ ಮಾಡಬೇಕಿತ್ತು ಎಂದು ವಾಗ್ದಾಳಿ ನಡೆಸಿದೆ.
PublicNext
22/10/2020 04:29 pm