ಪಾಟ್ನಾ: ಬಿಹಾರ ಜನತೆಗೆ ಉಚಿತ ಕೊರೊನಾ ವ್ಯಾಕ್ಸಿನ್ ನೀಡಲಾಗುವುದು ಎಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಬಿಹಾರದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಉಚಿತ ಕೊರೊನಾ ವ್ಯಾಕ್ಸಿನ್ ನೀಡುವ ವಾಗ್ದಾನವನ್ನು ಬಿಜೆಪಿ ಮಾಡಿದೆ. ಇದು ಸಾರ್ವಜನಿಕರು ಸೇರಿದಂತೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ #Vaccineelectionism ಹ್ಯಾಶ್ ಟ್ಯಾಗ್ ಟ್ರೆಂಡ್ ಆಗುತ್ತಿದೆ. ಅನೇಕ ನೆಟ್ಟಿಗರು ಬಿಜೆಪಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮೂಲಕ, ಬಿಜೆಪಿಯೇತರ ಸರ್ಕಾರಗಳು ಅಧಿಕಾರದಲ್ಲಿರುವ ರಾಜ್ಯಗಳ ಪರಿಸ್ಥಿತಿ ಏನು? ಭಾರತೀಯರು ಬಿಜೆಪಿಗೆ ಮತ ನೀಡದಿದರೆ ಉಚಿತ ಕೊರೊನಾ ಲಸಿಕೆ ಸಿಗುವದಿಲ್ವಾ ಎಂದು ಕೇಂದ್ರ ಸರ್ಕಾರವನ್ನ ಪ್ರಶ್ನೆ ಮಾಡಿದ್ದಾರೆ.
ಹೆಮ್ಮಾರಿ ಕೊರೊನಾ ವೈರಸ್‌ಗೆ ಭಾರತ ಸೇರಿದಂತೆ ವಿಶ್ವದಾದ್ಯಂತ ಲಸಿಕೆಗೆ ಸಂಶೋಧನೆಗಳು ನಡೆಯುತ್ತಿವೆ. ಆದರೆ ಕೊರೊನಾ ವ್ಯಾಕ್ಸಿನ್ ಬರುವ ಮುನ್ನವೇ ಬಿಜೆಪಿ ಚುನಾವಣೆಯಲ್ಲಿ ಲಾಭ ಪಡೆಯಲು ಮುಂದಾಗಿದೆ ಎಂದು ವಿಪಕ್ಷಗಳು ಕಿಡಿಕಾರಿವೆ.
PublicNext
22/10/2020 07:41 pm