ಬೆಂಗಳೂರು: ಆರ್ಆರ್ ನಗರ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾವೇರುತ್ತಿದೆ. ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳು ಸ್ಪರ್ಧಿಸಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಈ ಮಧ್ಯೆ ಕಾಂಗ್ರೆಸ್ ಇಟರ್ನಲ್ ರಿಪೋರ್ಟ್ ಬಿಡುಗಡೆ ಮಾಡಿದೆ. ಎರಡು ಕೇತ್ರದ ಉಭಯ ಚುನಾವಣೆಗಳಲ್ಲಿ ಕಾಂಗ್ರೆಸ್ ಪಾಲಿಗೆ ಒಂದು ಸೋಲು ಹಾಗೂ ಒಂದು ಗೆಲುವು ಸಿಗಲಿದೆ ಎಂದು ಪಕ್ಷದ ಇಂಟರ್ನಲ್ ವರದಿ ಹೇಳಿದೆ.
ಶಿರಾದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದ್ದು, ರಾಜರಾಜೇಶ್ವರಿ ನಗರದಲ್ಲಿ ಸೋಲು ಆಗಲಿದೆ. ಆರ್ಆರ್ ನಗರ ಕ್ಷೇತ್ರದಲ್ಲಿ ಸ್ಥಳೀಯ ಕಾರ್ಯಕರ್ತರ ಕೊರತೆಯೇ ಕಾಂಗ್ರೆಸ್ಗೆ ಹಿನ್ನಡೆ ಆಗಲಿದೆ. ಮುನಿರತ್ನ ಹಿಂದೆಯೇ ಬಿಜೆಪಿಯತ್ತ ಸ್ಥಳೀಯ ಕಾಂಗ್ರೆಸ್ ಮುಖಂಡರು ಮುಖಮಾಡಿದ್ದಾರೆ ಎನ್ನಲಾಗಿದೆ.
PublicNext
22/10/2020 07:57 pm