ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಮ್ಮ ನೆಲವನ್ನ ಆಕ್ರಮಿಸಿದ ಚೀನಾ ಸೈನ್ಯವನ್ನು ಹಿಮ್ಮೆಟ್ಟಿಸುವುದಾ ಯಾವಾಗ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪ್ರಶ್ನೆ

ಪಾಟ್ನಾ: ನಮ್ಮ ನೆಲವನ್ನ ಆಕ್ರಮಿಸಿದ ಚೀನಾ ಸೈನ್ಯವನ್ನು ಹಿಮ್ಮೆಟ್ಟಿಸುವುದಾ ಯಾವಾಗ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನಿಸಿದ್ದಾರೆ.

ಬಿಹಾರದ ನವಾಡಾ ಜಿಲ್ಲೆಯ ಹಿಸುವಾದಲ್ಲಿ ತೇಜಸ್ವಿ ಯಾದವ್ ಜತೆ 'ಬದಲಾವ್ ಸಂಕಲ್ಪ್' ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, 'ಚೀನಾ ವಿರುದ್ಧದ ಸಂಘರ್ಷದಲ್ಲಿ ನಮ್ಮ 20 ಯೋಧರು ಹುತಾತ್ಮರಾದರು. ಚೀನಾ ನಮ್ಮ 1,200 ಕಿ.ಮೀ ಭೂಭಾಗವನ್ನು ಅತಿಕ್ರಮಿಸಿದೆ. ಚೀನಾ ನಮ್ಮ ಗಡಿಯೊಳಗೆ ನುಗ್ಗಿದರೂ ಯಾರೊಬ್ಬರೂ ಒಳಗೆ ಬಂದಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನಮ್ಮ ಯೋಧರನ್ನು ಅವಮಾನಿಸಿದ್ದು ಯಾಕೆ? ಇವತ್ತು ನಾನು ತಲೆಬಾಗುತ್ತಿದ್ದೇನೆ ಅಂತಿದ್ದಾರೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರೇ, ಬಿಹಾರದ ಜನರ ಮುಂದೆ ಸುಳ್ಳು ಹೇಳಬೇಡಿ. ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ ನೀವು 2 ಕೋಟಿ ಉದ್ಯೋಗದ ಭರವಸೆ ಕೊಟ್ಟಿದ್ದಿರಿ. ಆದರೆ ಯಾರೊಬ್ಬರಿಗೂ ಉದ್ಯೋಗ ಸಿಕ್ಕಿಲ್ಲ. ಸೇನಾಪಡೆ , ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳ ಮುಂದೆ ತಲೆ ಬಾಗುತ್ತೇನೆ ಎಂದು ಹೇಳುತ್ತಿದ್ದಾರೆ. ಮನೆಗೆ ಹೋದ ಮೇಲೆ ಅಂಬಾನಿ ಮತ್ತು ಅದಾನಿಗೆ ಮಾತ್ರ ಕೆಲಸ ಮಾಡುತ್ತಾರೆ ಎಂದು ಕಿಡಿಕಾರಿದರು.

Edited By : Vijay Kumar
PublicNext

PublicNext

23/10/2020 04:16 pm

Cinque Terre

51.57 K

Cinque Terre

11

ಸಂಬಂಧಿತ ಸುದ್ದಿ