ರಾಯಚೂರು: ಹುಬ್ಬಳ್ಳಿ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ಮುಂದೆ ಅ.29 ರಂದು ಸಂಸದರನ್ನು ಹರಾಜು ಹಾಕಿ ಪ್ರತಿಭಟನೆ ಮಾಡುತ್ತೇವೆ. ಕೊಳ್ಳುವವರು ಬಂದು ಕೊಳ್ಳಬಹುದು ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
ರಾಯಚೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, 'ಸರ್ಕಾರ ಪ್ರವಾಹ ಪರಿಸ್ಥಿತಿಯನ್ನು ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ. ಉತ್ತರ ಕರ್ನಾಟಕದ ಜನ ಸಂಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ ಮಾನವೀಯತೆಯಿಲ್ಲ. ಇತ್ತೀಚೆಗೆ ಎಲ್ಲರೂ ಹೆಲಿಕಾಪ್ಟರ್ ರಾಜಕಾರಣಿಗಳಾಗಿದ್ದಾರೆ. ಯಡಿಯೂರಪ್ಪನವರ ಬಳಿ ಹೆಲಿಕಾಪ್ಟರ್ ಇದೆ' ಎಂದು ಗುಡುಗಿದರು.
ಕೇಂದ್ರ ಸರ್ಕಾರ ಕರ್ನಾಟಕವನ್ನು ಗುಲಾಮರ ರೀತಿ ನೋಡುತ್ತಿದೆ. ನಮ್ಮ ಸಂಸದರು ದನಕಾಯುತ್ತಿದ್ದಾರಾ? ಯಾಕೆ ಪ್ರಧಾನಿಯನ್ನು ಕರೆದುಕೊಂಡು ಬರುತ್ತಿಲ್ಲ? ಸದಾನಂದಗೌಡ ಸತ್ತರೂ ನಗ್ತಾರೆ, ಬದುಕಿದರೂ ನಗ್ತಾರೆ ಅವರ ನಗುವೆ ಒಂದು ವಿಚಿತ್ರ ಎಂದು ವ್ಯಂಗ್ಯವಾಡಿದರು.
PublicNext
23/10/2020 11:18 pm