ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರಪ್ರೇಮದ ಲಸಿಕೆ ಮಕ್ಕಳಿಗೆ ಕೊಡಬೇಕು: ಎಸ್‌.ಎಂ.ಕೃಷ್ಣ

ಬೆಂಗಳೂರು: ರಾಷ್ಟ್ರಭಕ್ತಿ ಹಾಗೂ ರಾಷ್ಟ್ರಪ್ರೇಮ ಎಂಬ ಲಸಿಕೆಯನ್ನು ನಾವು ಸಣ್ಣವಯಸ್ಸಿನಲ್ಲಿಯೇ ಮಕ್ಕಳಿಗೆ ಕೊಡಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್‍.ಎಂ.ಕೃಷ್ಣ ಅವರು ಹಿಂದುತ್ವದ ಕುರಿತು ಉಪನ್ಯಾಸ ನೀಡಿದ್ದಾರೆ.

ಬೆಂಗಳೂರಿನ ಕೇಶವ ಕೃಪಾದಲ್ಲಿ ಇಂದು ವಿಜಯದಶಮಿ ಹಿನ್ನೆಲೆಯಲ್ಲಿ ಆರ್‍ಎಸ್‍ಎಸ್ ಕಡೆಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಸ್‍ಎಂ ಕೃಷ್ಣ ಅವರು ಆರ್‍ಎಸ್‍ಎಸ್ ಟೋಪಿ ಧರಿಸಿ ಮೊದಲ ಬಾರಿಗೆ ಬಹಿರಂಗವಾಗಿ ಹಿಂದುತ್ವ ಮತ್ತು ಭಾರತೀಯತೆ ಬಗ್ಗೆ ಉಪನ್ಯಾಸ ಮಾಡಿದ್ದಾರೆ.

ದೇಶಭಕ್ತಿಯುಳ್ಳ ಸಂಘಕ್ಕೆ ನನ್ನ ಗೌರವವನ್ನು ಅರ್ಪಣೆ ಮಾಡಲು ಇಲ್ಲಿಗೆ ಬಂದಿದ್ದೇನೆ. ಅಮೆರಿಕದಲ್ಲಿ ಪ್ರತಿಯೊಬ್ಬರು ದೇಶಕ್ಕೋಸ್ಕರ ಎರಡು ವರ್ಷಗಳ ಕಾಲ ತಮ್ಮ ಜೀವನ ಮೀಸಲಾಗಿಡಬೇಕು. ನಮ್ಮ ದೇಶದಲ್ಲಿಯೂ ಕೂಡ ಎರಡು ವರ್ಷಗಳ ಕಾಲ ನಮ್ಮನ್ನು ನಾವು ಅರ್ಪಿಸಿಕೊಳ್ಳುವಂತಾಗಬೇಕು. ನಮ್ಮನ್ನು ನಾವು ದೇಶಕ್ಕೆ ಅರ್ಪಣೆ ಮಾಡಿಕೊಳ್ಳುವುದರಿಂದ ನಮ್ಮ ರಾಷ್ಟ್ರಾಭಿಮಾನ ಅಭಿವ್ಯಕ್ತವಾಗುತ್ತದೆ ಎಂದು ಹೇಳಿದರು.

Edited By : Vijay Kumar
PublicNext

PublicNext

25/10/2020 11:39 pm

Cinque Terre

75.4 K

Cinque Terre

13

ಸಂಬಂಧಿತ ಸುದ್ದಿ