ತುಮಕೂರು: ಶಿರಾ ಉಪಚುನಾವಣೆ ಪ್ರಚಾರ ರಂಗೇರಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು, ಅಭ್ಯರ್ಥಿಗಳು ಮತದಾರರ ಮನವೊಲಿಕೆಗೆ ಸರ್ವ ಪ್ರಯತ್ನ ನಡೆಸಿದ್ದಾರೆ. ಈ ಮಧ್ಯೆ ಮತಕ್ಕಾಗಿ ನೋಟು ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಹಾಸನದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ಮತದಾರರನನ್ನು ಸೆಳೆಯಲು ತಮ್ಮ ಬೆಂಬಲಿಗರ ಮೂಲಕ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ದುಡ್ಡು ತಗೊಂಡು ಬಿಜೆಪಿಗೆ ವೋಟ್ ಹಾಕಿ ಎಂದು ಪ್ರೀತಂ ಗೌಡ ಬೆಂಬಲಿಗರು ಎನ್ನಲಾದ ವ್ಯಕ್ತಿಗಳು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಮಹಿಳೆಯರಿಗೆ ಹರಿಶಿಣ-ಕುಂಕುಮದ ಜೊತೆ ಹಣ ಹಂಚಿಕೆ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ. "ಹಣ ಕೊಡುವಂತೆ ನಮ್ಮ ಶಾಸಕ ಪ್ರೀತಂ ಗೌಡ ಹೇಳಿದ್ದಾರೆ. ಪ್ರತಿ ಚುನಾವಣೆಯಲ್ಲಿ ಕೇವಲ ಗಂಡಸರಿಗೆ ಕೈಗೆ ಹಣ ಕೊಟ್ಟು ಹೋಗುತ್ತಾರೆ. ತಾಯಂದಿರಿಗೆ ಏನೂ ಕೊಡುವುದಿಲ್ಲ. ಆದರೆ ಇವತ್ತು 200 ರೂಪಾಯಿ ಕೊಡುತ್ತೇವೆ. ನಾಳೆ, ಆಚೆ ನಾಳಿದ್ದು ಕೂಡ ಹಣ ಹಂಚಲಾಗುವುದು' ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
PublicNext
27/10/2020 05:07 pm