ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಕೈ' ನಾಯಕರು ಯುದ್ಧಕ್ಕೆ ಮುಂಚೆಯೇ ಶಸ್ತ್ರತ್ಯಾಗ ಮಾಡಿದಂತಿದೆ: ಸುಧಾಕರ್

ಬೆಂಗಳೂರು: ಶಿರಾ ಹಾಗೂ ಆರ್‌ಆರ್‌ ನಗರ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂಬ ಕಾಂಗ್ರೆಸ್‌ ನಾಯಕ ದಿನೇಶ್ ಗುಂಡೂರಾವ್ ಹೇಳಿಕೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ.

ಮೊದಲು ಟ್ವೀಟ್ ಮಾಡಿದ ದಿನೇಶ್ ಗುಂಡೂರಾವ್ ಅವರು, ಬಿಜೆಪಿ ಈಗಾಗಲೇ ಆಡಳಿತ ಯಂತ್ರ ದುರುಪಯೋಗ ಪಡಿಸಿಕೊಂಡು ಜನರ ಮೇಲೆ ಪ್ರಭಾವ ಬೀರುತ್ತಿದೆ. ಆರ್ಆರ್ ನಗರದಲ್ಲಿ ಹಣ ಮತ್ತು ಸೆಟ್‌ಟಾಪ್ ಬಾಕ್ಸ್ ವಿತರಣೆ ಮಾಡಿದ್ದರೂ ಚುನಾವಣಾ ಆಯೋಗ ಮೌನವಾಗಿದೆ. ಚುನಾವಣಾ ಆಯೋಗ ಕೇವಲ ಬೆದರು ಬೊಂಬೆಯೇ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಸಚಿವ ಸುಧಾಕರ್, 'ಉಪಚುನಾವಣೆಗಳ ಮತದಾನಕ್ಕೆ ಇನ್ನೂ ಒಂದು ವಾರ ಇರುವಾಗಲೇ ಸೋಲಿಗೆ ನೆಪಗಳನ್ನು ಹುಡುಕುತ್ತಿರುವ ಕಾಂಗ್ರೆಸ್ ನಾಯಕರ ವರಸೆ ನೋಡಿದರೆ ಯುದ್ಧಕ್ಕೆ ಮುಂಚೆಯೇ ಶಸ್ತ್ರತ್ಯಾಗ ಮಾಡಿದಂತಿದೆ. ಕಾಂಗ್ರೆಸ್ ಪಕ್ಷವನ್ನು ಮತದಾರರು ತಿರಸ್ಕರಿಸಿದ್ದು, ಆರ್.ಆರ್.ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ' ಎಂದು ಹೇಳಿದ್ದಾರೆ.

Edited By : Vijay Kumar
PublicNext

PublicNext

27/10/2020 07:03 pm

Cinque Terre

119.72 K

Cinque Terre

5

ಸಂಬಂಧಿತ ಸುದ್ದಿ