ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಕರ್ನಾಟಕವಿದೆ ಎನ್ನುವುದೇ ಗೊತ್ತಿಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಅವರು, ಕರ್ನಾಟಕದಲ್ಲಿ ಅತಿ ಹೆಚ್ಚು ಬಿಜೆಪಿ ಸಂಸದರು ಇದ್ದಾರೆ. ಆದರೆ ಯಾರೊಬ್ಬರೂ ನೆರೆ ಸಂತ್ರಸ್ತರ ಪರ ಮಾತಾಡುತ್ತಿಲ್ಲ. ಕೇಂದ್ರದ ಮೇಲೆ ಒತ್ತಡ ತರುವ ಸಣ್ಣ ಪ್ರಯತ್ನವನ್ನೂ ಮಾಡಿಲ್ಲ ಎಂದು ಆರೋಪಿಸಿದರು.
ಪ್ರವಾಹದಿಂದ ಉತ್ತರ ಕರ್ನಾಟಕ ಮುಳುಗಿದ್ದು, ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಅತಿ ಹೆಚ್ಚು ಹಾನಿಯಾಗಿದೆ. ಆದರೆ ಸಿಎಂ ಯಡಿಯೂರಪ್ಪ ಅವರು ಕಾಟಾಚಾರಕ್ಕೆ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ಜನರ ಕೂಗನ್ನು ಆಲಿಸುವ ಪ್ರಯತ್ನ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
PublicNext
27/10/2020 07:53 pm