ಜಮ್ಮು ಮತ್ತು ಕಾಶ್ಮೀರ : ಹಲವಾರು ಕಾನೂನುಗಳನ್ನು ತಿದ್ದುಪಡಿಗೊಳಿಸುವ ಮೂಲಕ ಯಾವುದೇ ಭಾರತೀಯ ಪ್ರಜೆಯು ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಭೂಮಿ ಖರೀದಿಸಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.
ಆರ್ಟಿಕಲ್ 370 ರದ್ದು ಮಾಡಿ ಒಂದು ವರ್ಷ ಕಳೆದಿದೆ. ಇದೀಗ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರ ಹಾಗೂ ಲಡಾಖ್ ಭೂ ಕಾನೂನು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ತಿದ್ದುಪಡಿಗೊಂಡಿರುವ ನೂತನ ಕಾನೂನಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಹೊರಗಿನ ನಿವಾಸಿಗೂ ಭೂಮಿ ಖರೀದಿಸಲು ಅವಕಾಶ ನೀಡಿದೆ.
ಆದರೆ ಕೃಷಿ ಭೂಮಿ ಖರೀದಿಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ.
ಕೇಂದ್ರ ಸರ್ಕಾರದ ನೂತನ ತಿದ್ದುಪಡಿಗೆ ನ್ಯಾಷನಲ್ ಕಾನ್ಫೆರನ್ಸ್ ಮುಖಂಡ ಓಮರ್ ಅಬ್ದುಲ್ಲಾ ಖಂಡಿಸಿದ್ದಾರೆ.
ಸಣ್ಣ ಭೂಮಾಲಿಕರಿಗೆ ನೇರ ಹೊಡೆತ ನೀಡಲಿದೆ. ತಕ್ಷಣವೇ ಕೇಂದ್ರ ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಎಂದು ಅಬ್ದುಲ್ಲಾ ಟ್ವಿಟರ್ ಮೂಲಕ ಆಗ್ರಹಿಸಿದ್ದಾರೆ.
PublicNext
28/10/2020 07:37 am