ಬೆಂಗಳೂರು- ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸುವಾಗ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಪಡಿಸಿದ್ದಾರೆ.
ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರ ನಡೆಸಿ ಭಾಷಣ ಮಾಡ್ತಿದ್ದರು. ಈ ವೇಳೆ ಅಲ್ಲಿದ್ದ ಕೆಲವು ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ ಪರ ಜೈಕಾರದ ಘೋಷಣೆ ಕೂಗಿದ್ದಾರೆ.
ಇದನ್ನು ವಿರೋಧಿಸಿ ಯಶವಂತಪುರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಅಭ್ಯರ್ಥಿ ಕುಸುಮಾ ಅವರೇ ಸ್ವತಃ ಸ್ಥಳಕ್ಕೆ ಆಗಮಿಸಿದರು. ಜೊತೆಗೆ ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ಭೈರತಿ ಸುರೇಶ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಮ್ಮ ಪ್ರಚಾರಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
PublicNext
28/10/2020 12:24 pm