ಬೆಂಗಳೂರು: ಸಿಎಂ ಯಡಿಯೂರಪ್ಪ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಏನು ಎಳಸು ಎತ್ತುಗಳೇ? ಪ್ರಧಾನಿ ನರೇಂದ್ರ ಮೋದಿ ಎರಡು ಹಲ್ಲು ಎತ್ತೇ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರನ್ನು ಮುದಿ ಎತ್ತು ಎಂದಿರುವ ಬಿಜೆಪಿ ನಾಯಕ ಬಿ.ಜೆ ಪುಟ್ಟಸ್ವಾಮಿ ಅವರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಶಿರಾದಲ್ಲಿ ಬಿಜೆಪಿ ನಾಯಕರು ಚುನಾವಣೆಗೆ ಹಣ ಚೆಲ್ಲುತ್ತಿದ್ದಾರೆ. ಅವರು ಏನೆ ಮಾಡಿದರೂ ಕಾಂಗ್ರೆಸ್ ಗೆಲ್ಲಲಿದೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಸೋಲಿನ ಭಯದಿಂದ ಕ್ಷೇತ್ರದಲ್ಲಿ ಗಲಾಟೆ ಮಾಡಿಸುತ್ತಿದ್ದಾರೆ. ಪಿಎಸ್ಐ ಮುನಿರತ್ನ ಪರ ಇದ್ದು ಮುನಿರತ್ನ ಗಲಾಟೆಗಳಿಗೆ ಸಾಥ್ ನೀಡುತ್ತಿದ್ದಾನೆ ಎಂದು ಗಂಭೀರ ಆರೋಪ ಮಾಡಿದರು.
PublicNext
28/10/2020 04:13 pm