ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಸೋದು ಅಸಾಧ್ಯವಾಗಿದೆ.

ಬೆಂಗಳೂರು- ರಾಜ್ತದಲ್ಲಿ ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿ ಇರೋದಿಲ್ಲ ಎಂದವರು ಹಿಂದೆ ಅದೇ ಜೆಡಿಎಸ್ ಪಕ್ಷದಿಂದಲೇ ಅಧಿಕಾರ ಅನುಭವಿಸಿ ಹೋಗಿದ್ದಾರೆ ಎಂಧು ಜೆಡಿಎಸ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಪರೋಕ್ಷವಾಗಿ ಸಿದ್ದರಾಮಯ್ಯ ಅವರ ನಡೆಯನ್ನು ಟೀಕಿಸಿದ್ದಾರೆ

ಬೆಂಗಳೂರಿನ ಜೆಪಿ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮತಾನಾಡಿದ ಅವರು ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ. ಎಲ್ಲ ಮುಖಂಡರು ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ಮೈತ್ರಿ ಸರ್ಕಾರವನ್ನು ಯಾರು ಕೆಡವಿದ್ದು ಅನ್ನೋದು ಇಡೀ ರಾಜ್ಯದ ಜನೆತೆಗೆ ಗೊತ್ತಿದೆ. ೧೬ ಜನ ಶಾಸಕರನ್ನು ಮುಂಬೈ ರೆಸಾರ್ಟಿಗೆ ಯಾರು ಕಳಿಸಿದ್ದಾರೆಂದು ಅಲ್ಲಿಗೆ ಹೋದ ಶಾಸಕರೇ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದಾರೆ ಎಂದ ದೇವೇಗೌಡರು ತಮ್ಮ ಶಿಷ್ಯ ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ಕುಟುಕಿದರು.

ಶಿರಾ ಕ್ಷೇತ್ರದಲ್ಲಿ ಬಿಜೆಪಿ ಪೊಲೀಸರ ಮೂಲಕವೇ ದುಡ್ಡು ಹಂಚುತ್ತಿದ್ದಾರೆ ಎನ್ನುವ ಆರೋಪ ಇದೆ. ಈ ಬಗ್ಗೆ ಕೆಲವರು ದೂರು ನೀಡಿದ್ರೂ ಪ್ರಯೋಜನವಾಗಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಮಾತಾಡ್ತಾ ಕೂತ್ರೆ ಏನೂ ಉಪಯೋಗ ಇಲ್ಲ. ಹೀಗಾಗಿ ಈ ದೇಶದಲ್ಲಿ ನಿಷ್ಪಕ್ಷಪಾತವಾಗಿ ಚುನಾವಣೆ ಮಾಡೋಕೆ ಆಗುತ್ತಾ ನೀವೇ ಹೇಳಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Edited By : Nagaraj Tulugeri
PublicNext

PublicNext

29/10/2020 01:02 pm

Cinque Terre

64.74 K

Cinque Terre

11

ಸಂಬಂಧಿತ ಸುದ್ದಿ