ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಸರ್ಕಾರದ ಖಾತೆಯಲ್ಲಿ ಸಾಲ ಮಾಡಿ ತಾವಷ್ಟೇ ಹೋಳಿಗೆ ತಿನ್ನುತ್ತಿದ್ದಾರೆ'

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ, ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, 'ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವುದನ್ನು ಬಿಟ್ಟು ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಹೊಸದಾಗಿ ಒಂದೇ ಒಂದು ಕಾರ್ಯಕ್ರಮವನ್ನು ಜಾರಿಮಾಡಿಲ್ಲ. ದುರಂತವೆಂದರೆ ನಮ್ಮ ಹಲವು ಕಾರ್ಯಕ್ರಮಗಳಿಗೂ ಅನುದಾನ ನೀಡದೆ ಇತಿಶ್ರೀ ಹಾಡಿದ್ದೇ ಬಿಜೆಪಿ ಸರ್ಕಾರದ ಈ ವರೆಗಿನ ಸಾಧನೆ' ಎಂದು ಟಾಂಗ್ ಕೊಟ್ಟಿದ್ದಾರೆ.

Edited By : Vijay Kumar
PublicNext

PublicNext

29/10/2020 02:26 pm

Cinque Terre

55.56 K

Cinque Terre

13

ಸಂಬಂಧಿತ ಸುದ್ದಿ