ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಎಸ್‌ವೈ ಕುಟುಂಬ ಜೆಸಿಬಿಯಿಂದ ಹಣ ಬಾಚುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕುಟುಂಬ ಜೆಸಿಬಿ ಮೂಲಕ ಹಣ ಬಾಚುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, 'ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು. ಆದರೆ ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಸಿಎಂ ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು' ಎಂದು ಪ್ರಶ್ನಿಸಿದ್ದಾರೆ.

'ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಎಂದಿದ್ದಾರೆ. ಅವರ ಹೇಳಿಕೆ ಗಮನಿಸಿದರೆ ಬಹುಶಃ ಸಿಎಂ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ' ಎಂದು ಟಾಂಗ್ ನೀಡಿದ್ದಾರೆ.

'ಕೆ.ಆರ್ ಪೇಟೆಯಲ್ಲಿ ಹಣ ಹಂಚಿದಂತೆ ಶಿರಾದಲ್ಲೂ ಬಿಜೆಪಿಯವರು ಮತದಾರರ ಮನೆಬಾಗಿಲಿಗೆ ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. ಈ ವಿಚಾರ ಪೊಲೀಸ್ ಇಲಾಖೆ, ಚುನಾವಣಾ ಆಯೋಗಕ್ಕೆ ಗೊತ್ತಿದ್ದರೂ ಅವುಗಳು ಕಣ್ಣುಮುಚ್ಚಿ ಕೂತಿರುವುದೇಕೆ' ಎಂದು ಪ್ರಶ್ನಿಸಿದ್ದಾರೆ.

Edited By : Vijay Kumar
PublicNext

PublicNext

29/10/2020 02:46 pm

Cinque Terre

39.26 K

Cinque Terre

7

ಸಂಬಂಧಿತ ಸುದ್ದಿ