ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವಾಹ ಸ್ಥಿತಿ ಎದುರಿಸಲು ವಿಶೇಷ ಅಧಿವೇಶನ ಕರೆಯಿರಿ

ಬೆಂಗಳೂರು- ರಾಜ್ಯದಲ್ಲಿ ಪ್ರವಾಹದ ಪರಿಣಾಮ ವ್ಯತಿರಿಕ್ತವಾಗಿದೆ. ಸರ್ಕಾರ ಕೂಡಲೇ ಈ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ್ಲಲಿ ಸಂಚರಿಸಿ ಬಂದಿರುವ ಸಿದ್ದರಾಮಯ್ಯ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಅವಲೋಕಿಸಿದ್ದಾರೆ. ಜೊತೆಗೆ ಉತ್ತರ ಕರ್ನಾಟಕ ಭಾಗದ ಪ್ರವಾಹ ಪೀಡಿತ ಎಲ್ಲ ಜಿಲ್ಲೆಗಳಲ್ಲಿ ಜನಜೀವನ ವ್ಯವಸ್ಥೆಯನ್ನು ಯಥಾಸ್ಥಿತಿಗೆ ತರಬೇಕಿದೆ. ಆದರೆ ಸರ್ಕಾರ ಪ್ರವಾಹ ಪರಿಸ್ಥತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಈ ಬಗ್ಗೆ ಗಹನವಾಗಿ ಚರ್ಚೆ ಮಾಡಲು ಮತ್ತು ಮುಂದಿನ ತುರ್ತು ಕ್ರಮಗಳ ಬಗ್ಗೆ ಚರ್ಚಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಬೇಕೆಂದು ಸಿದ್ದರಾಮಯ್ಯ ಪತ್ರ ಮುಖೇನ ಒತ್ತಾಯಿಸಿದ್ದಾರೆ

Edited By : Nagaraj Tulugeri
PublicNext

PublicNext

29/10/2020 04:21 pm

Cinque Terre

55.17 K

Cinque Terre

3

ಸಂಬಂಧಿತ ಸುದ್ದಿ