ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಉಪ ಕದನದ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ'

ಬೆಂಗಳೂರು: ಶಿರಾ ಹಾಗೂ ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಶುಕ್ರವಾರ ಮಾತನಾಡಿದ ಸಿಎಂ, ‘ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣವೇ ದೆಹಲಿಗೆ ಹೋಗುತ್ತೇನೆ. 24 ಗಂಟೆಗಳಲ್ಲಿ ಮರಳಿ ಬಂದು ಸಂಪುಟ ವಿಸ್ತರಣೆ ಮಾಡುತ್ತೇನೆ' ಎಂದು ತಿಳಿಸಿದರು.

ರಾಜ್ಯದಲ್ಲಿ ಸರ್ಕಾರದ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಕಾಂಗ್ರೆಸ್‌ ಮುಖಂಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ‘ಹೌದು ಚುನಾವಣೆ ಬಳಿಕ ನಿಶ್ಚಿತವಾಗಿಯೂ ಬದಲಾವಣೆ ಆಗಲಿದೆ. ಎರಡೂ ಕ್ಷೇತ್ರಗಳಲ್ಲಿ ನಾವು ದೊಡ್ಡ ಅಂತರದಿಂದ ಗೆಲ್ಲುತ್ತೇವೆ. ಆ ಬಳಿಕ ಈ ಪ್ರಶ್ನೆಗೆ ಅವರೇ ಉತ್ತರ ನೀಡುತ್ತಾರೆ‌’ ಎಂದು ಟಾಂಗ್ ನೀಡಿದರು.

Edited By : Vijay Kumar
PublicNext

PublicNext

31/10/2020 07:49 am

Cinque Terre

42.85 K

Cinque Terre

1

ಸಂಬಂಧಿತ ಸುದ್ದಿ