ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಮುನಿರತ್ನ ಗೆದ್ದ ಕೂಡಲೇ ಮಂತ್ರಿಗಿರಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸಿಎಂ, 'ಈಗಾಗಲೇ ಸಂಪುಟ ವಿಸ್ತರಣೆ ಮಾಡಬೇಕಿತ್ತು. ಆದರೆ ಕೆಲವು ಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ. ಇದೀಗ ಉಪ ಚುನಾವಣೆ ಮುಗಿದ ಕೂಡಲೇ ದೆಹಲಿಗೆ ಹೋಗುತ್ತೇನೆ. ನೂರಕ್ಕೆ ನೂರರಷ್ಟು ಮುನಿರತ್ನ ಅವರನ್ನು ಮಂತ್ರಿಯನ್ನಾಗಿ ಮಾಡುತ್ತೇನೆ' ಎಂದು ಭರವಸೆ ನೀಡಿದರು.
ಯಾವುದೇ ಜಾತಿ ರಾಜಕಾರಣ ಈ ಚುನಾವಣೆಯಲ್ಲಿ ನಡೆಯುವುದಿಲ್ಲ. ಎಲ್ಲ ಜಾತಿಯನ್ನ ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ. ಒಕ್ಕಲಿಗ ಸಮುದಾಯದ ಸಚಿವರು ನಮ್ಮಲ್ಲಿ ಹೆಚ್ಚಿದ್ದಾರೆ. ಮುನಿರತ್ನ ಕೊರೊನಾ ಸಂದರ್ಭದಲ್ಲಿ ಚೆನ್ನಾಗಿ ಕೆಲಸ ಮಾಡಿದ್ದು ಅವರು 40 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
PublicNext
31/10/2020 01:19 pm