ತುಮಕೂರು: ಶಿರಾ ಉಪಚುನಾವಣಾಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ದಾಖಲಿಸಿದರೆ ಕ್ಷೇತ್ರವನ್ನು ದತ್ತು ಪಡೆದು ಅಭಿವೃದ್ಧಿ ಮಾಡುವುದಾಗಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಶಿರಾದಲ್ಲಿ ನಿನ್ನೆಯಷ್ಟೇ ಪ್ರಚಾರ ನಡೆಸಿದ್ದ ಸಿಎಂ ಯಡಿಯೂರಪ್ಪ, 'ಕ್ಷೇತ್ರವನ್ನು ಶಿಕಾರಿಪುರದಂತೆ ಅಭಿವೃದ್ಧಿ ಮಾಡುತ್ತೇನೆ ಎಂಬ ಭರವಸೆ ನೀಡಿದ್ದರು. ಈ ಬೆನ್ನಲ್ಲೇ ಇಂದು ಕ್ಷೇತ್ರದಲ್ಲಿ ದೇವೇಗೌಡರು, ಕ್ಷೇತ್ರವನ್ನು ದತ್ತು ತೆಗೆದುಕೊಳ್ಳುವ ಮೂಲಕ ಅಭಿವೃದ್ಧಿಗೆ ಬದ್ಧ ಎನ್ನುವ ಮೂಲಕ ಮುಖ್ಯಮಂತ್ರಿಗಳಿಗೆ ಟಾಂಗ್ ನೀಡಿದ್ದಾರೆ.
'ನನ್ನ 60 ವರ್ಷದ ರಾಜಕೀಯದ ಇತಿಹಾಸದಲ್ಲಿ ಯಾವುದೇ ಗ್ರಾಮವನ್ನು ದತ್ತು ಪಡೆದಿಲ್ಲ. ಆದರೆ ಈಗ ಶಿರಾ ಕ್ಷೇತ್ರವನ್ನು ದತ್ತು ಪಡೆದು ಅಭಿವೃದ್ಧಿ ಮಾಡುತ್ತೇನೆ' ಎಂದು ಭರವಸೆ ನೀಡಿದರು.
PublicNext
31/10/2020 04:10 pm