ಬೆಂಗಳೂರು: ಬೈ ಎಲೆಕ್ಷನ್ ಕಣದಲ್ಲಿ ಒಬ್ಬರು ಮತ್ತೊಬ್ಬರ ಮೇಲೆ ಟೀಕಾ ಪ್ರಹಾರವನ್ನು ಮುಂದುವರೆಸಿದ್ದಾರೆ.
ಸದ್ಯ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಪ್ರಧಾನಿ ಮೋದಿ ನನ್ನ ಸರ್ಕಾರದಲ್ಲಿ ಜಾರಿಗೆ ತಂದ ಯೋಜನೆಗಳನ್ನೇ ಹೈಜಾಕ್ ಮಾಡಿ ಅವುಗಳನ್ನು ತಮ್ಮ ಸ್ವಂತ ಯೋಜನೆಗಳು ಎಂಬಂತೆ ಬಿಂಬಿಸಿಕೊಳ್ತಿದ್ದಾರೆ ಎಂದು ಹೆಚ್.ಡಿ.ಕೆ ಗಂಭೀರ ಆರೋಪ ಮಾಡಿದ್ದಾರೆ.
ರಾಜರಾಜೇಶ್ವರಿ ನಗರ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ಮತಯಾಚಿಸಿ ಮಾತನಾಡಿದ ಅವರು ನಾನು 9 ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ ಸ್ಥಾಪಿಸುವುದಕ್ಕೆ ಉತ್ತೇಜನ ನೀಡಿದೆ.
ಅದನ್ನೇ ಈಗ ಆತ್ಮ ನಿರ್ಭರ ಭಾರತ ಎಂದು, ಬೀದಿ ಬದಿ ವ್ಯಾಪಾರಿಗಳಿಗೆ ಬಡ್ಡಿರಹಿತ ಸಾಲ ನೀಡಲು ಬಡವರ ಬಂಧು ಯೋಜನೆ ಜಾರಿಗೆ ತಂದಿದ್ದೆ ಮೋದಿ ಅವರು 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.
ಈ ದೇಶವನ್ನು ಬಾಂಗ್ಲಾದೇಶ, ವಿಯಾಟ್ನಾಂ ಜೊತೆ ಪೈಪೋಟಿ ನಡೆಸುವ ಹಂತಕ್ಕೆ ಮೋದಿ ತಂದಿದ್ದಾರೆ ಎಂದರು.
ಜೆಡಿಎಸ್ ಕೇವಲ ಕೃಷಿಕರಿಗಾಗಿ ಇರುವ ಪಕ್ಷ ಅಲ್ಲ, ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ಕೊಡುಗೆ ನೀಡಿದೆ.
ಅದರಲ್ಲೂ ಬೆಂಗಳೂರಿನ ಪ್ರಗತಿಗೆ ನಮ್ಮ ಪಕ್ಷದ ಕೊಡುಗೆ ಅಪಾರ. ನಮ್ಮ ಮೆಟ್ರೋ, ಎಲಿವೇಟೆಡ್ ಕಾರಿಡಾರ್ ನಂತಹ ಅನೇಕ ಯೋಜನೆಗಳನ್ನು ಪ್ರಾರಂಭಿಸಿದ್ದು ನನ್ನ ಸರಕಾರದಲ್ಲಿ ಎಂದ ಅವರು, ಬೆಂಗಳೂರಿಗೆ ಕಾವೇರಿ ನೀರು ಸಿಗಲು ಮಾಜಿ ಪ್ರಧಾನಿ ದೇವೇಗೌಡರು ಕಾರಣ ಎಂದರು.
ಅಬ್ಬರದ ಪ್ರಚಾರ ಮಾಡದೇ ಆತ್ಮೀಯವಾಗಿ ಜನರನ್ನು ಭೇಟಿ ಮಾಡಿ ಮತ ಕೇಳಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
PublicNext
31/10/2020 10:33 pm