ಬೆಂಗಳೂರು: ಬೈ ಎಲೆಕ್ಷನ್ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಾಯಂಕಾಲ ತೆರೆ ಬೀಳಲಿದೆ.
ಈ ಬಾರಿ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ವತಃ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರೇ ಅಬ್ಬರದ ಪ್ರಚಾರ ನಡೆಸಿದ್ದಾರೆ.
ಪ್ರಚಾರದ ವೇಳೆ ಮುಸ್ಲಿಮರು ಹೆಚ್ಚಾಗಿರುವ ಪ್ರದೇಶದಲ್ಲಿ ಬಾಬ್ರಿ ಮಸೀದಿ ವಿಷಯ ಪ್ರಸ್ತಾಪಿಸಿದ ದೇವೇಗೌಡ್ರು ಅಲಹಾಬಾದ್ ಹೈಕೋರ್ಟ್ ನ ತೀರ್ಪನ್ನು ಟೀಕಿಸಿದ್ದಾರೆ.
1 ಲಕ್ಷಕ್ಕೂ ಅಧಿಕ ಜನರ ಮುಂದೆ ಮಸೀದಿಯನ್ನು ಕೆಡವಿದ್ದಾಗ, ಈ ಬಗ್ಗೆ ವಿಡಿಯೊ ಸಾಕ್ಷಿಗಳೇ ಇದ್ದಾಗಲೂ ಆರೋಪಿಗಳು ಖುಲಾಸೆಗೊಂಡಿದ್ದಾರೆ.
ಇದು ದೇಶದ ಪರಿಸ್ಥಿತಿ ಎಂದರು. ಇದಕ್ಕೆ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರೇ ಕಾರಣ ಎಂದು ಆರೋಪಿಸಿದ ದೇವೇಗೌಡರು ರಾಜೀವ್ ಗಾಂಧಿ ಸರ್ಕಾರದಲ್ಲಿ ಬೂಟಾ ಸಿಂಗ್ ಅವರು ಗೃಹ ಸಚಿವರಾಗಿದ್ದಾಗ ಮಸೀದಿಯ ಬಾಗಿಲು ತೆರೆದರು ಎಂದು ಆರೋಪಿಸಿದರು.
1992ರ ಡಿಸೆಂಬರ್ 6ರಂದು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬಾಬ್ರಿ ಮಸೀದಿಯನ್ನು ಕೆಡವಿದ್ದರು.
ಶಿರಾ ಚುನಾವಣೆಯೇ ನನಗೆ ಕೊನೆಯಾಗಬಹುದು, ನನಗೆ ಈಗಾಗಲೇ 88 ವರ್ಷ ಸದ್ಯದಲ್ಲಿಯೇ ರಾಜಕೀಯದಿಂದ ನಿವೃತ್ತಿ ಹೇಳಬಹುದು ಎಂದರು.
PublicNext
01/11/2020 10:15 am