ತುಮಕೂರು: ಶಿರಾ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರು ಸಮಾವೇಶದ ವೇಳೆಯೇ ಕುಸಿದು ಬಿದ್ದಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಉಪಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ದೊಡ್ಡ ಮಟ್ಟದ ರ‍್ಯಾಲಿ, ಸಮಾವೇಶವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮ್ಮಾಜಮ್ಮ ಅವರು ಕಾರ್ಯಕ್ರಮದ ಮಧ್ಯದಲ್ಲೇ ಕುಸಿದು ಬಿದ್ದಿದ್ದಾರೆ.
ಟಿಕೆಟ್ ಘೋಷಣೆಯಾದ ದಿನವೇ ಅಮ್ಮಾಜಮ್ಮ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಚಿಕಿತ್ಸೆ ಪಡೆದು ಗುಣಮಖರಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು.
PublicNext
01/11/2020 04:19 pm