ಪಾಟ್ನಾ: ರಾಮನ ಅಸ್ತಿತ್ವ ಪ್ರಶ್ನಿಸಿದವರನ್ನ ಬಿಹಾರದ ಜನತೆ ಮರೆಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ವಿರುದ್ಧ ಗುಡುಗಿದ್ದಾರೆ.
ಬಿಹಾರದ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಕ್ಷೇತ್ರವಾದ ಪಶ್ಚಿಮ ಚಂಪರಣ್ನಲ್ಲಿ ಪ್ರಧಾನಿ ಮೋದಿ ಭಾನುವಾರ ಪ್ರಚಾರ ನಡೆಸಿದರು. ಈ ವೇಳೆ ಪ್ರತಿಪಕ್ಷಗಳ ವಿರುದ್ಧ ಗುಡುಗಿದ ಅವರು, 'ನಾಗರಿಕ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಪಕ್ಷಗಳು ತಪ್ಪು ಮಾಹಿತಿ ಹರಿದುಬಿಡುತ್ತಿವೆ. ಕೆಲವರು ರಾಮನ ಅಸ್ತಿತ್ವವನ್ನು ಪ್ರಶ್ನೆ ಮಾಡಿದ್ದರಿಂದಲೇ ಅಯೋಧ್ಯೆಯಲ್ಲಿನ ರಾಮ ಮಂದಿರ ನಿರ್ಮಾಣ ಪ್ರಕ್ರಿಯೆ ವಿಳಂಬವಾಯಿತು. ಸದ್ಯ ಜನರ ಸಹಕಾರದಿಂದ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ' ಎಂದು ಹೇಳಿದರು.
PublicNext
01/11/2020 10:19 pm