ಬೆಂಗಳೂರು : ರಾಜ್ಯರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ , ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆ ಬಹಿರಂಗ ಪ್ರಚಾರ ಭಾನುವಾರ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದೆ.
ಆರೋಪ ಪ್ರತ್ಯಾರೋಪ, ರಾಜಕೀಯ ಪ್ರತಿಷ್ಠೆಗಳಿಗೆ ಕಾರಣವಾಗಿದ್ದ ಕರ್ನಾಟಕದ 2 ಕ್ಷೇತ್ರಗಳ ಉಪ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.
ಮಂಗಳವಾರ ಬೆಳಗ್ಗೆ 7 ರಿಂದ ಸಂಜೆ 6ರ ತನಕ ಮತದಾನ ನಡೆಯಲಿದೆ.
ಆರ್. ಆರ್. ನಗರ ಕ್ಷೇತ್ರದಲ್ಲಿ 16, ಶಿರಾದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದು, ಮಂಗಳವಾರ ಮತದಾನ ನಡೆಯಲಿದೆ.
ನವೆಂಬರ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಯಾರಿಗೆ ಗೆಲುವು? ಎಂಬುದು ತಿಳಿಯಲಿದೆ.
ಇನ್ನೂ ಬಹಿರಂಗ ಪ್ರಚಾರಕ್ಕೆ ಬಿಳುತ್ತಿದ್ದಂತೆ ಮತದಾರರು ಅಲ್ಲದವರು ಕ್ಷೇತ್ರ ಬಿಟ್ಟು ಹೋಗಬೇಕು ಎಂದು ಆರ್. ಆರ್. ನಗರ ಕ್ಷೇತ್ರದ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್ ಸೂಚಿಸಿದ್ದರು.
ಇಂದು ಅಭ್ಯರ್ಥಿಗಳು ಮನೆ ಮನೆ ಪ್ರಚಾರವನ್ನು ನಡೆಸಬಹುದಾಗಿದೆ.
PublicNext
02/11/2020 08:17 am