ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲ್ ಕಾಮಿಡಿ ಆ್ಯಕ್ಟರ್: ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರದ್ದು ನಾಯಿಪಾಡು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ರಾಜ್ಯ ಕಾಂಗ್ರೆಸ್‌ ಕಿಡಿಕಾರಿದೆ.

ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವೀಟ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿ, 'ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆ್ಯಕ್ಟರ್ ನಳಿನ್ ಕುಮಾರ್ ಕಟೀಲು ಸಾಕ್ಷಿ. ಇವರ ಮಾತಿನಲ್ಲಿ ಘನತೆ, ಗೌರವ, ಬದ್ಧತೆ, ಯಾವುದೂ ಇಲ್ಲ. ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ನಲ್ಲಿ ಬೆಲೆ ಇಲ್ಲ ಎಂದು ಅವರು ಹೇಳಿಕೆ ನೀಡಿದ್ದಾರೆ. ಆದರೆ ಸರ್ವ ಜನಾಂಗದ ನಾಯಕ, ಹಣಕಾಸು ತಜ್ಞ, 168 ಯೋಜನೆಗಳನ್ನು ಘೋಷಿಸಿ ಜಾರಿಗೊಳಿಸಿ ನುಡಿದಂತೆ ನಡೆದ ನಾಯಕ' ಎಂದು ತಿರುಗೇಟು ನೀಡಿದೆ.

ನಳಿನ್ ಕುಮಾರ್ ಕಟೀಲು ಅವರೇ ಪದೇ ಪದೇ ಅವಹೇಳನ ಮಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ನೋಟಿಸನ್ನೂ ಕೊಡದಿದ್ದಿದ್ದು, ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಮುಖ್ಯಮಂತ್ರಿ ಭೇಟಿಗೆ ಸಣ್ಣ ಸಮಯ ಕೊಡದಿದ್ದಿದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯಲ್ಲಿ ಯಾವ ಪಾಡಿನಲ್ಲಿದ್ದಾರೆ ಎಂದು ಸೂಚಿಸುತ್ತದೆ. ಪಕ್ಷ ಕಟ್ಟಿದ ಅವರನ್ನ ಚೆನ್ನಾಗಿ ನೋಡಿಕೊಳ್ಳಿ ಎಂದು ಟಾಂಗ್ ಕೊಟ್ಟಿದೆ.

ಸಂಸದ ಕಟೀಲ್ ಅವರು ತಮ್ಮ ನಡೆ-ನುಡಿ ಮೂಲಕ ತಾನೊಬ್ಬ ಅಪ್ರಬುದ್ಧ, ಅನಾಗರಿಕ, ಸಡಿಲ ನಾಲಿಗೆಯ ಯಕಶ್ಚಿತ್ ರಾಜಕಾರಣಿ ಎಂದು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿಯ ಮಾನ ಹರಾಜು ಹಾಕಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು. ಅವರು ಇದೇ ರೀತಿ ಮಾತನಾಡುತ್ತಾ ಬಿಜೆಪಿಯ ಬಣ್ಣ ಬಯಲು ಮಾಡುತ್ತಲೇ ಇರಲಿ ಎಂದು ಗುಡುಗಿದೆ.

Edited By : Vijay Kumar
PublicNext

PublicNext

02/11/2020 03:00 pm

Cinque Terre

45.6 K

Cinque Terre

5

ಸಂಬಂಧಿತ ಸುದ್ದಿ