ಬೆಂಗಳೂರು: ಬಿಬಿಎಂಪಿ ಮಾಜಿ ಮೇಯರ್ ಸಂಪತ್‌ರಾಜ್ ಎಲ್ಲೂ ಹೋಗಿಲ್ಲ, ಅವರ ಮನೆಯಲ್ಲೇ ಇದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಡಿಜೆಹಳ್ಳಿ, ಕೆಜಿಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಸಂಪತ್‌ರಾಜ್ ಅವರಿಗಾಗಿ ಸಿಸಿಬಿ ನಾಲ್ಕು ವಿಶೇಷ ತಂಡ ಹುಡುಕಾಟ ನಡೆಸಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಅವರು ಸಂಪತ್‌ರಾಜ್ ಪರ ಬ್ಯಾಟಿಂಗ್ ಮಾಡಿದ್ದಾರೆ. 'ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಂಪತ್‌ರಾಜ್ ವೈದ್ಯರು ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಪೊಲೀಸರು ಬೇಕು ಅಂತಲೇ ಸುಳ್ಳು ಸುದ್ದಿ ಮಾಡುತ್ತಿದ್ದಾರೆ' ಎಂದಿದ್ದಾರೆ.
PublicNext
02/11/2020 10:17 pm