ಬೆಂಗಳೂರು : ಮೂರು ಪಕ್ಷಗಳ ಪ್ರತಿಷ್ಠೆಯ ಕ್ಷೇತ್ರವಾಗಿರುವ ಶಿರಾ ಮತ್ತು ಆರ್ ಆರ್ ನಗರದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಈ ಕ್ಷೇತ್ರಗಳ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.
ಶಿರಾ ಕ್ಷೇತ್ರದಲ್ಲಿ 6 ಅತಿ ಸೂಕ್ಷ್ಮ, 64 ಸೂಕ್ಷ್ಮ ಮತಗಟ್ಟೆ ಸೇರಿ ಒಟ್ಟು 330 ಮತಗಟ್ಟೆ ಹಾಗೂ ಆರ್ . ಆರ್ . ನಗರ ಕ್ಷೇತ್ರದಲ್ಲಿ 11 ಅತಿ ಸೂಕ್ಷ್ಮ , 82 ಸೂಕ್ಷ್ಮ ಮತಗಟ್ಟೆ ಸೇರಿ ಒಟ್ಟು 678 ಮತಗಟ್ಟೆ ಸ್ಥಾಪಿಸಲಾಗಿದೆ.
ಮತಪಟ್ಟಿಯಲ್ಲಿ ಹೆಸರು ಹೊಂದಿರುವವರು ಮತ ಚಲಾಯಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಹಾಜರುಪಡಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯ ದಾಖಲೆ ಸಲ್ಲಿಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ .
PublicNext
03/11/2020 07:33 am