ಕೋಲ್ಕತಾ: ಮಾರಕ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಕಾಳಿ ಪೂಜೆ ಮತ್ತು ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧ ಮಾಡಿ ಆದೇಶಿಸಿದೆ.
ಕಾಳಿ ಪೂಜೆ ಮತ್ತು ದೀಪಾವಳಿಯ ಸಂದರ್ಭದಲ್ಲಿ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರು ಮಂಗಳವಾರ ಹೇಳಿದ್ದಾರೆ.
ಕೋವಿಡ್-19 ರೋಗಿಗಳಿಗೆ ಅಪಾಯಕಾರಿಯಾದ ವಾಯು ಮಾಲಿನ್ಯ ತಡೆಯಲು ಕಾಳಿ ಪೂಜಾ ಮತ್ತು ದೀಪಾವಳಿ ಹಬ್ಬಗಳಲ್ಲಿ ಪಟಾಕಿ ಸಿಡಿಸಲು ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಅಲಾಪಾನ ಬಂಡ್ಯೋಪಾದ್ಯಾಯ ತಿಳಿಸಿದ್ದಾರೆ.
ನಿನ್ನೆಯಷ್ಟೇ ರಾಜಸ್ಥಾನ ಸರ್ಕಾರ ಸಹ ಪಟಾಕಿ ಮಾರಾಟವನ್ನು ನಿಷೇಧಿಸಿದೆ. ಕೋವಿಡ್ 19 ಸೋಂಕಿಗೆ ತುತ್ತಾದ ರೋಗಿಗಳಲ್ಲಿ ಉಸಿರಾಟದ ಸಮಸ್ಯೆ ಸಾಮಾನ್ಯ. ಹೀಗಾಗಿ ಅವರ ಆರೋಗ್ಯ ರಕ್ಷಣೆ ಮತ್ತು ಸಾರ್ವಜನಿಕರಿಗೆ ಅನಾರೋಗ್ಯ ತಂದೊಡ್ಡಲಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿಡಿಮದ್ದು(ಪಟಾಕಿ) ಮಾರಾಟ ನಿಷೇಧಿಸಲಾಗಿದೆ ಎಂದು ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದರು
PublicNext
03/11/2020 09:53 pm