ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎರಡನೇ ಬಾರಿಯೂ ನಾನೇ ಅಧ್ಯಕ್ಷ ಎಂದ ಟ್ರಂಪ್

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಹಾಗೂ ಉಪಾಧ್ಯಕ್ಷೀಯ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ನ್ಯೂಯಾರ್ಕ್ ಸೇರಿದಂತೆ ದೇಶದ ಎಲ್ಲಾ 50 ರಾಜ್ಯಗಳಲ್ಲಿ ಉತ್ತಮ ಮತದಾನ ನಡೆಯುತ್ತಿದೆ. ಮತದಾನ ಪ್ರಕ್ರಿಯೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಇನ್ನು ಅಮೆರಿಕನ್ನರು ತಮ್ಮನ್ನು ಎರಡನೇ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ಖಚಿತ ಎಂದು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭರವಸೆ ವ್ಯಕ್ತಪಡಿಸಿದ್ದಾರೆ. ನಾಲ್ಕು ವರ್ಷಗಳ ತಮ್ಮ ಆಡಳಿತಾವಧಿಯಲ್ಲಿ ಜಾಗತಿಕವಾಗಿ ಅಮೆರಿಕದ ಸ್ಥಾನಮಾನ ಉತ್ತುಂಗಕ್ಕೇರಿದೆ. ಅಮೆರಿಕ ತನ್ನ ಇತಿಹಾಸದಲ್ಲೇ ಇಷ್ಟು ಸದೃಢ ಸ್ಥಾನವನ್ನು ಇದೇ ಮೊದಲ ಬಾರಿಗೆ ಪಡೆಯಲು ಸಾಧ್ಯವಾಗಿದೆ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.

ಕೊರೊನಾ ವೈರಸ್ ಹಾವಳಿಯ ನಡುವೆಯೂ ಅಮೆರಿಕದ ಆರ್ಥಿಕ ಸ್ಥಿತಿಗತಿಯನ್ನು ಕಾಪಾಡಿಕೊಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಅಲ್ಲದೇ ವಿಶ್ವದ ಹಲವು ರಾಷ್ಟ್ರಗಳೊಂದಿಗೆ ನಮ್ಮ ಸೌಹಾರ್ದ ಸಂಬಂಧ ವೃದ್ಧಿಸುವಲ್ಲಿ ಯಶಸ್ವಿಯಾಗಿದ್ದೇವೆ. ತಮ್ಮ ಆಡಳಿತದ ಈ ಸಾಧನೆಯನ್ನು ಅಮೆರಿಕದ ಜನತೆ ಗುರುತಿಸಲಿದ್ದಾರೆ ಎಂದು ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ಆಡಳಿತಾವಧಿಯಲ್ಲಿ ಅಮೆರಿಕದ ವಿದೇಶಾಂಗ ನೀತಿಯೂ ಭಾರೀ ಸಕಾರಾತ್ಮಕ ಫಲಿತಾಂಶವನ್ನು ನೀಡಿದ್ದು, 'ಅಮೆರಿಕ ಫಸ್ಟ್' ನೀತಿಯಿಂದ ಭಾರೀ ಲಾಭವಾಗಿದೆ ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.

Edited By : Nagaraj Tulugeri
PublicNext

PublicNext

03/11/2020 10:47 pm

Cinque Terre

78.45 K

Cinque Terre

5

ಸಂಬಂಧಿತ ಸುದ್ದಿ