ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅರ್ನಬ್ ಬಂಧನ: ಮಹಾರಾಷ್ಟ್ರ ಪೊಲೀಸರ ಮೇಲೆ ಅಮಿತ್ ಶಾ ಆಕ್ರೋಶ

ನವದೆಹಲಿ- ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧಿಸಿದ ಮಹಾರಾಷ್ಟ್ರ ಪೊಲೀಸರ ಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ಕಾಂಗ್ರೆಸ್ ಮತ್ತು ಕಾಂಗ್ರೆಸ್ಸಿನ ಮಿತ್ರ ಪಕ್ಷಗಳು ಮತ್ತೊಮ್ಮೆ ಪ್ರಜಾಪ್ರಭುತ್ವವನ್ನು ಅಣಕಿಸುವ ಕೆಲಸ ಮಾಡಿವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ರಿಪಬ್ಲಿಕ್ ಟಿವಿಯ ಪತ್ರಕರ್ತ ಅರ್ನಬ್ ಗೋಸ್ವಾಮಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾತಂತ್ರದ ನಾಲ್ಕನೇ ಆಧಾರ ಸ್ತಂಭದ ಮೇಲೆ ನಡೆದ ದಾಳಿ ಇದಾಗಿದೆ. ಅರ್ನಬ್ ಅವರನ್ನು ವಶಕ್ಕೆ ಪಡೆದಿದ್ದು ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಮುಕ್ತ ಮಾಧ್ಯಮಗಳ ಮೇಲಿನ ಮಾರಕ ನೀತಿಯನ್ನು ನಾವೆಲ್ಲ ವಿರೋಧಿಸಬೇಕಿದೆ ಎಂದು ಅಮಿತ್ ಶಾ ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

04/11/2020 12:50 pm

Cinque Terre

107.38 K

Cinque Terre

42

ಸಂಬಂಧಿತ ಸುದ್ದಿ